ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಚುನಾವಣಾ ಆಯೋಗಕ್ಕೆ ತಪ್ಪು ಲೆಕ್ಕ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಶಾಸಕ ಸ್ಥಾನದಿಂದ ಜಮೀರ್ ಅನರ್ಹಗೊಳಿಸುವಂತೆ ಬಿಜೆಪಿ ಮುಖಂಡ ದೂರು
ಮಾಜಿ ಸಚಿವ ಜಮೀರ್ ಅಹಮದ್ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳಿಗೆ ತಪ್ಪು ಆಸ್ತಿ ಲೆಕ್ಕ ನೀಡಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಮುಖಂಡ ಎಸ್.ಆರ್.ರಮೇಶ್ ದೂರು ನೀಡಿದ್ದಾರೆ.
ಬಿಜೆಪಿ ಮುಖಂಡ ಎಸ್.ಆರ್.ರಮೇಶ್
ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ದಾಖಲೆ ನೀಡಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಪ್ರಕರಣವನ್ನು ಹೈಕೋರ್ಟ್ನಲ್ಲಿಯೂ ದಾಖಲಿಸುತ್ತೇನೆ. ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧ ಎಂದು ಅವರು ತಿಳಿಸಿದ್ದಾರೆ.