ಕರ್ನಾಟಕ

karnataka

ETV Bharat / state

ಮಾಜಿ ಸಂಸದ ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ: 'ಆನೆ ಬಲ' ಎಂದ ಸಿಎಂ

ಮಾಜಿ ಸಂಸದ ವಿರೂಪಾಕ್ಷಪ್ಪ ನಮ್ಮ ಜೊತೆ ಸೇರಬೇಕು ಎಂದು ನಮಗೆ ಅಪೇಕ್ಷೆ ಇತ್ತು. ಅದರಂತೆ ಇಂದು ಅವರು ಪಕ್ಷ ಸೇರುತ್ತಿದ್ದಾರೆ. ಅವರಿಗೆ ನಾನು ಸ್ವಾಗತ ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

Former MP Virupakshappa joins BJP
ಮಾಜಿ ಸಂಸದ ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ

By

Published : Mar 9, 2021, 12:41 PM IST

ಬೆಂಗಳೂರು: ಇಂದು ಮಾಜಿ ಸಂಸದ ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದು, ರಾಯಚೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ 'ಆನೆ ಬಲ' ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಣ್ಣಿಸಿದ್ದಾರೆ.

ಬಿಜೆಪಿಯ ಜಗನ್ನಾಥ ಭವನದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೂಪಾಕ್ಷಪ್ಪ ಈ ಹಿಂದೆ ನಮ್ಮ ಜೊತೆಯೇ ಇದ್ದರು. ಆದರೆ ಯಾವುದೋ ಕಾರಣಕ್ಕೆ ನಮ್ಮಿಂದ ದೂರ ಆಗಿದ್ರು. ಇದೀಗ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಈ ತಿಂಗಳ 20 ನೇ ತಾರೀಖು ಮಸ್ಕಿಯಲ್ಲಿ ವಿರೂಪಾಕ್ಷಪ್ಪ ಅವರು ಸಾವಿರಾರು ಜನರ ಜೊತೆಗೂಡಿ ಸಭೆ ಮಾಡ್ತಾರೆ. ವಿರೂಪಾಕ್ಷಪ್ಪ ಜೊತೆಗೂಡಿ ಅವರ ಬೆಂಬಲಿಗರು ಪಕ್ಷ ಸೇರಿದ್ದಾರೆ. ವಿರೂಪಾಕ್ಷಪ್ಪ ನಮ್ಮ ಜೊತೆ ಸೇರಬೇಕೆಂಬುದು ನಮಗೆ ಅಪೇಕ್ಷೆ ಇತ್ತು. ಅದರಂತೆ ಇಂದು ಅವರು ಪಕ್ಷ ಸೇರುತ್ತಿದ್ದಾರೆ. ಅವರಿಗೆ ನಾನು ಸ್ವಾಗತ ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿರೂಪಾಕ್ಷಪ್ಪ ಜೊತೆ ಅನೇಕ ಬ್ಲಾಕ್ ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಓದಿ:ಬಿಎಸಿ ಸಭೆಗೆ ಸದ್ಯ ಹೋಗುವುದಿಲ್ಲ: ಸಿದ್ದರಾಮಯ್ಯ

ABOUT THE AUTHOR

...view details