ನವ ದೆಹಲಿ:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಾಸನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆ, ಅಂತಾರಾಜ್ಯ ನದಿಗಳಾದ ಕಾವೇರಿ, ಕೃಷ್ಣಾ, ಮಹದಾಯಿ ನದಿಗಳ ನೀರಿನ ಹಂಚಿಕೆ, ಒಕ್ಕಲಿಗರ ಉಪಜಾತಿಯಾಗಿ ಕುಂಚಿಟಿಗರನ್ನು ಓಬಿಸಿಯ ಕೇಂದ್ರೀಯ ಪಟ್ಟಿಯಲ್ಲಿ ಸೇರಿಸಬೇಕೆಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿಗೆ ದೇವೇಗೌಡ ಮನವಿ
ನಾನು ನನ್ನ ಮನವಿ ಪತ್ರದಲ್ಲಿ ನದಿಗಳ ನೀರಾವರಿ ಹಂಚಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.- ಹೆಚ್.ಡಿ.ದೇವೇಗೌಡ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ
ಈ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, ನಾನು ನನ್ನ ಮನವಿ ಪತ್ರದಲ್ಲಿ ನದಿಗಳ ನೀರಾವರಿ ಹಂಚಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ನಾನು ನೀಡಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದರು.
ಇದನ್ನೂ ಓದಿ:ಸರ್ಕಾರದ ವರ್ಗಾವಣೆ ಕುತಂತ್ರಕ್ಕೆ ಬ್ರೇಕ್ ಹಾಕಿ: ಚುನಾವಣಾ ಆಯೋಗಕ್ಕೆ ಆಪ್ ಮನವಿ
Last Updated : Dec 14, 2022, 7:14 AM IST