ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಮ್ಮ ನಿವಾಸದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿದರು.
ಪದ್ಮನಾಭನಗರದಲ್ಲಿರುವ ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ದೇವೇಗೌಡರು ರಾಷ್ಟ್ರಧ್ವಜ ಹಾರಿಸುವ ಮೂಲಕ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಮನೆಯ ಬಾಲ್ಕನಿಯಲ್ಲಿ ನಿಂತು ರಾಷ್ಟ್ರಧ್ವಜ ಹಾರಿಸಿದ ಮಾಜಿ ಪ್ರಧಾನಿ ದೇವೇಗೌಡ ರಾಷ್ಟ್ರಧ್ವಜವನ್ನು ಹಿಡಿದಿಟ್ಟುಕೊಳ್ಳಲು ಮತ್ತು ಅದಕ್ಕೆ ನನ್ನ ಅಚಲ ನಿಷ್ಠೆಯನ್ನು ಪ್ರತಿಜ್ಞೆ ಮಾಡಲು ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಇದು ನಮ್ಮ ಸ್ವಾತಂತ್ರ್ಯದ ದೊಡ್ಡ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಭಾರತೀಯರಾದ ನಾವೆಲ್ಲರೂ ಸಾಮರಸ್ಯದಿಂದ ಬದುಕುವ ಮಹಾನ್ ಆದರ್ಶವನ್ನು ಈಡೇರಿಸಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹರ್ ಘರ್ ತಿರಂಗಾ ಅಭಿಯಾನ.. ಮನೆ ಮನೆಗೆ ತೆರಳಿ ಧ್ವಜ ನೀಡಿದ ನಿರ್ಮಲಾ ಸೀತಾರಾಮನ್