ಬೆಂಗಳೂರು:ಖಾಸಗಿ ಶಾಲಾ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನುದಾನರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಬಾಕಿ ಆರ್ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ತಕ್ಷಣ ನೆರವಿವೆರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ. ಖಾಸಗಿ ಶಾಲೆಗಳ ಶಿಕ್ಷಕರ ಸಹಾಯಕ್ಕೆ ಸರ್ಕಾರ ಕೂಡಲೇ ಧಾವಿಸಬೇಕು. ಈಗಾಗಲೇ ಈ ವಿಷಯವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ. ಬೇಕಾದರೆ ಮತ್ತೊಂದು ಪತ್ರವನ್ನು ಸಿಎಂಗೆ ಬರೆದು ಒತ್ತಾಯಿಸುತ್ತೇನೆ. ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಈ ವಿಚಾರವನ್ನು ನಾನು ಮುಂದಿನ ಸಂಸತ್ ಅಧಿವೇಶನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ತರುತ್ತೇನೆ. ಅವಶ್ಯ ಬಿದ್ದರೆ ಅಧಿವೇಶನದಲ್ಲಿ ಚರ್ಚೆಗೂ ಸಿದ್ಧ ಎಂದು ಹೇಳಿದರು.