ಬೆಂಗಳೂರು: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ಕೊರೊನಾ ಸೋಂಕಿಗೆ ಲಸಿಕೆಗಳ ಪ್ರಗತಿ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿದ್ದಾರೆ.
ಪ್ರಧಾನಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ
ದೇಶದಲ್ಲಿ ಕೊರೊನಾ ನಿಯಂತ್ರಣ ಹಾಗೂ ಕೋವಿಡ್ ಲಸಿಕೆ ತಯಾರಿಕೆಯ ಕುರಿತು ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ
ಪದ್ಮನಾಭನಗರದ ತಮ್ಮ ನಿವಾಸದಿಂದಲೇ ಇಂದು ವರ್ಚುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿರುವ ದೇವೇಗೌಡರು, ಕೋವಿಡ್ ಪರಿಸ್ಥಿತಿ ಹಾಗೂ ದೇಶದಲ್ಲಿ ನಡೆಯುತ್ತಿರುವ ಕೆಲ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ಹಾಗೂ ಲಸಿಕೆ ಬಗ್ಗೆ ನೀಡುತ್ತಿರುವ ಮಾಹಿತಿಯನ್ನು ಸಹ ದೇವೇಗೌಡರು ಪಡೆದುಕೊಂಡಿದ್ದಾರೆ.