ಬೆಂಗಳೂರು: ಜ್ವರದ ಲಕ್ಷಣ ಕಾಣಿಸಿದ ಹಿನ್ನೆಲೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಕೋವಿಡ್ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಆದರೆ, ಅವರ ವರದಿ ನೆಗೆಟಿವ್ ಎಂದು ಬಂದಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ನೆಗೆಟಿವ್, ಪತ್ನಿಗೆ ಮಾತ್ರ ಪಾಸಿಟಿವ್.. - devegowda news
ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಕೋವಿಡ್ ವರದಿ ಪಾಸಿಟಿವ್ ಆಗಿದೆ. ಅವರು ಕೂಡ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ತಜ್ಞ ವೈದ್ಯರಿಂದ ಹೆಚ್ ಡಿ ದೇವೇಗೌಡ ಅವರ ಆರೋಗ್ಯ ಪರೀಕ್ಷಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಲವಲವಿಕೆಯಿಂದ ಇದ್ದಾರೆ ಎಂದು ಆಸ್ಪತ್ರೆ ಮಾಧ್ಯಮ ಮಾಹಿತಿ ಹೊರಡಿಸಿದೆ. ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಕೋವಿಡ್ ವರದಿ ಪಾಸಿಟಿವ್ ಆಗಿದೆ. ಅವರು ಕೂಡ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರಿಗೂ ಕೋವಿಡ್ ಪಾಸಿಟಿವ್ ಇದೆ ಎಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಪರೀಕ್ಷೆ ನಡೆಸಿದ ನಂತರ ಈ ವರದಿ ಬಂದಿದೆ. ಈ ಸಂಬಂಧ ರಾಜ್ಯದ ಹಲವಾರು ರಾಜಕೀಯ ಮುಖಂಡರು ದೇವೇಗೌಡ ದಂಪತಿ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದರು. ಹಾಗೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, ಬೇಗ ಗುಣಮುಖರಾಗಿ ಬನ್ನಿ ಎಂದಿದ್ದರು.