ಕರ್ನಾಟಕ

karnataka

ETV Bharat / state

ಆಸ್ಪತ್ರೆಯಿಂದ ಮನೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರು - medical health checkup

ಮಂಡಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ಇಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

former-prime-minister-deve-gowda-went-home-today-from-the-hospital
ಆಸ್ಪತ್ರೆಯಿಂದ ಇಂದು ಮನೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರು

By

Published : Mar 6, 2023, 7:03 PM IST

ಬೆಂಗಳೂರು: ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಇಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಕಳೆದ ಐದು ದಿನಗಳ ಹಿಂದೆ ಕಾಲು ಊತ ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ವಿವಿಧ ಪರೀಕ್ಷೆಗಳನ್ನು ಮಾಡಿದ ಬಳಿಕ ಅವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇದೀಗ ಹೆಚ್​.ಡಿ ದೇವೇಗೌಡರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನವೇ ಟ್ವೀಟ್ ಮಾಡಿದ ದೇವೇಗೌಡರು, ರೋಟಿನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ದೇವೇಗೌಡರು ಆರಾಮಾಗಿದ್ದು, ಊಟ ತಿಂಡಿ ಮಾಡಿಕೊಂಡು ಚೆನ್ನಾಗಿದ್ದಾರೆ. ಯಾವುದೇ ತುರ್ತು ಚಿಕಿತ್ಸೆ ಅಗತ್ಯವಿಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಕೂಡ ಅಂದು ತಿಳಿಸಿದ್ದರು.

ದೇವೇಗೌಡರಿಂದ 100 ಕಿ.ಮೀ ರೋಡ್​ ಶೋ: ಜೆಡಿಎಸ್​ನ ಪಂಚರತ್ನ ರಥಯಾತ್ರೆ ಸಮಾರೋಪ ಸಮಾರಂಭ ಮಾರ್ಚ್​ 26 ರಂದು ಮೈಸೂರಿನಲ್ಲಿ ನಡೆಯಲಿದೆ. ಅಂದು ಕುಂಬಳಗೋಡಿನಿಂದ ಮೈಸೂರಿನವರೆಗೆ ತೆರೆದ ವಾಹನದಲ್ಲಿ ಸುಮಾರು 100 ಕಿಲೋ ಮೀಟರ್​ ಗೌಡರು ರೋಡ್ ಶೋ ಮಾಡುವ ಉದ್ದೇಶವಿದೆ. ಪಕ್ಷದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದಲೇ ಗೌಡರು ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು ಎಂದು ಹೇಳಲಾಗಿದೆ.

ಮಾ. 11 ಅಥವಾ 14ರಂದು ಜೆಡಿಎಸ್ ಎರಡನೇ ಪಟ್ಟಿ:ಇದೇ ತಿಂಗಳ 11 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲಾಗುವುದು. ಪಟ್ಟಿಯಲ್ಲಿ 60ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರುಗಳು ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಶನಿವಾರ ನಡೆದ ಪಕ್ಷ ಸೇರ್ಪಡೆ ಸಭೆಯಲ್ಲಿ ಹೇಳಿದ್ದರು.

ಟಿಕೆಟ್​ಗಾಗಿ ರೇವಣ್ಣ ಕುಟುಂಬದ ಪಟ್ಟು:ಹಾಸನ ಮತ್ತು ಹೊಳೆನರಸೀಪುರ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್‌ಗೆ ಹೆಚ್.ಡಿ ರೇವಣ್ಣ ಕುಟುಂಬ ಪಟ್ಟು ಹಿಡಿದಿದೆ. ಈ ಸಮಸ್ಯೆಯನ್ನು ಬಗೆಹರಿಸುವ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಕುಟುಂಬಕ್ಕಿಂತ ಪಕ್ಷದ ಕಾರ್ಯಕರ್ತರು ಮುಖ್ಯ ಎಂದು ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ.

ಮುಸ್ಲಿಂ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಆ ಸಮುದಾಯದ ಪ್ರಾಬಲ್ಯ ಇರುವ ಸುಮಾರು 40 ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಮುಸ್ಲಿಂ ಸಮುದಾಯ ಹೆಚ್ಚಿರುವ ಕ್ಷೇತ್ರಗಳ ಹೊಣೆ ನೀಡಲು ಪಕ್ಷ ತೀರ್ಮಾನಿಸಿದೆ. ಈಗಾಗಲೇ ಚುನಾವಣೆ ಕಾವು ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆಸಿರುವ ಸಮೀಕ್ಷೆಯಲ್ಲಿ ಮುಸ್ಲಿಂ ಸಮುದಾಯದಲ್ಲಿ ವಿಶ್ವಾಸ ಮೂಡಿಸಬೇಕಿದೆ ಎಂಬ ಅಂಶ ವ್ಯಕ್ತವಾಗಿದ್ದು ಸಿ.ಎಂ ಇಬ್ರಾಹಿಂ ಅವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಬ್ರಿಟಿಷರಿಗಿಂತ ಮುಂಚೆ ಭಾರತದ ಶೇ 70ರಷ್ಟು ಜನ ವಿದ್ಯಾವಂತರಾಗಿದ್ದರು: ಮೋಹನ್​​ ಭಾಗವತ್

ABOUT THE AUTHOR

...view details