ಕರ್ನಾಟಕ

karnataka

ETV Bharat / state

ವಿಧಿ 370 ರದ್ದು ಮೂಲಕ ವಿ.ಪಿ.ಸಿಂಗ್ ಕನಸು ನನಸು: ಲಿಂಬಾವಳಿ - bangalore latest news

73ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಣಿವೆ ರಾಜ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. 370, 35ಎ ವಿಧಿ ರದ್ದತಿಯು ಕೇಂದ್ರದ ಐತಿಹಾಸಿಕ ನಿರ್ಧಾರವಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

73ನೇ ಸ್ವಾತಂತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿದ ಮಾಜಿ ಸಚಿವ ಅರವಿಂದ ಲಿಂಬಾವಳಿ

By

Published : Aug 15, 2019, 7:42 PM IST

ಬೆಂಗಳೂರು: ಕೇಂದ್ರ ಸರ್ಕಾರವೂ 370, 35ಎ ವಿಧಿಯನ್ನು ರದ್ದು ಪಡಿಸುವ ಮೂಲಕ ಮಾಜಿ ಪ್ರಧಾನಿ ವಿ.ಪಿ.ಸಿಂಗ್​ ಅವರ ಕನಸನ್ನು ಸಾಕಾರಗೊಳಿಸಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳದರು.

ಮಾಜಿ ಸಚಿವ ಅರವಿಂದ ಲಿಂಬಾವಳಿ

ಇಲ್ಲಿನ ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

73 ವರ್ಷಗಳ ಬಳಿಕ ಐತಿಹಾಸಿಕ ತೀರ್ಮಾವನ್ನು ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಕಣಿವೆ ರಾಜ್ಯದಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿರುವು ಸಂತಸ ತಂದಿದೆ ಎಂದರು.

ಧ್ವಜಾರೋಹಣವನ್ನು ತಾಲೂಕು ದಂಡಾಧಿಕಾರಿ ತೇಜಸ್ ಕುಮಾರ್​ ನೆರವೇರಿಸಿದರು. 20ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆ.ಆರ್.ಪುರ ಠಾಣೆಯ ಆರಕ್ಷಕ ಸಿಬ್ಬಂದಿ, ಕಾಲೇಜು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಸುವ ಮೂಲಕ ರಾಷ್ಟ್ರ ಧ್ವಜ ಹಾಗೂ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ABOUT THE AUTHOR

...view details