ಬೆಂಗಳೂರು/ಆನೇಕಲ್: ಸಾಲಬಾಧೆಯಿಂದ ಕೀಟನಾಶಕ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕೊಡ್ಲಿಪುರ ಗ್ರಾಮದಲ್ಲಿ ನಡೆದಿದೆ. ಪಾಪಣ್ಣ(50) ಎಂಬ ರೈತ ತಮ್ಮ ಜಮೀನಿನ ಪಂಪ್ ಹೌಸ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಕೈ ಕೊಟ್ಟ ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ - ಆನೇಕಲ್ ತಾಲೂಕಿನ ಕೊಡ್ಲಿಪುರ ಗ್ರಾಮದಲ್ಲಿ ರೈತ ಆತ್ಮಹತ್ಯೆ
ಸಾಲಬಾಧೆಯಿಂದ ಕೀಟನಾಶಕ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕೊಡ್ಲಿಪುರ ಗ್ರಾಮದಲ್ಲಿ ನಡೆದಿದೆ.
![ಕೈ ಕೊಟ್ಟ ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಸಾಲಭಾದೆಯಿಂದ ರೈತ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-5357157-thumbnail-3x2-smk.jpg)
ಸಾಲಭಾದೆಯಿಂದ ರೈತ ಆತ್ಮಹತ್ಯೆ
ತನ್ನ 30 ಗುಂಟೆ ಜಮೀನಿನ ಜೊತೆಗೆ ಬೇರೆ ಜಮೀನನ್ನು ಗುತ್ತಿಗೆ ಪಡೆದು ಹೂ ಹಾಗೂ ತರಕಾರಿ ಬೆಳೆಯುತ್ತಿದ್ದ. ಆದರೆ ಇತ್ತೀಚೆಗೆ ಬೆಳೆದ ತರಕಾರಿ ಹಾಗೂ ಹೂಗಳಿಗೆ ಸರಿಯಾಗಿ ಬೆಲೆ ಸಿಕ್ಕಿರಲಿಲ್ಲ. ಹಾಗೂ ಮಳೆಯಿಂದಾಗಿ ಬೆಳೆದ ಬೆಳೆಯಲ್ಲ ನಷ್ಟವಾಗಿತ್ತು.
ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಈ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
former sicied in anekal