ಕರ್ನಾಟಕ

karnataka

ETV Bharat / state

ದೇವೇಗೌಡರನ್ನು ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ - ದೇವೇಗೌಡರನ್ನು ಭೇಟಿ ಮಾಡಿದ ಸಿ.ಎಂ.ಇಬ್ರಾಹಿಂ

ಇಂದು ಕೇಂದ್ರ ಸಚಿವ ಮತ್ತು ವಿಧಾನಪರಿಷತ್​​ ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ದೇವೇಗೌಡರನ್ನು ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ
Former Union Minister CM Ibrahim met HD Deve Gowda

By

Published : Dec 14, 2020, 2:41 PM IST

ಬೆಂಗಳೂರು :ಉಪಚುನಾವಣೆಯಲ್ಲಿ ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ.

ದೇವೇಗೌಡರನ್ನು ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ

ಪ್ರಾದೇಶಿಕ ಪಕ್ಷವಾಗಿರುವ ಜೆಡಿಸ್ ಅ​ನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಪಣತೊಟ್ಟಿರುವ ನಾಯಕರು ರಾಜಕೀಯ ಕಸರತ್ತಿಗೆ ಮುಂದಾಗಿದ್ದಾರೆ. ಜೆಡಿಎಸ್​​​ನಲ್ಲೂ ಬದಲಾವಣೆ ಗಾಳಿ ಬೀಸುತ್ತಿದ್ದು, ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಇಂದು ಮಾಜಿ ಕೇಂದ್ರ ಸಚಿವ ಮತ್ತು ವಿಧಾನಪರಿಷತ್​​ ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಿ.ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ದೇವೇಗೌಡರು ಚರ್ಚೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕ ಆರ್. ಮಂಜುನಾಥ್, ಮಾಜಿ ಶಾಸಕ ಸುರೇಶ್ ಬಾಬು ಸಹ ಇದ್ದರು.

ಓದಿ :ಕೋಡಿಹಳ್ಳಿ ಇಲ್ಲೊಂದು-ಅಲ್ಲೊಂದು ಮಾತಾಡೋದು ಸರಿಯಲ್ಲ : ಸಚಿವ ಆರ್.ಅಶೋಕ್

ಕುಮಾರಸ್ವಾಮಿ ಅವರು ಇತ್ತೀಚೆಗೆ ಇಬ್ರಾಹಿಂ ಅವರ ನಿವಾಸಕ್ಕೆ ತೆರಳಿ ಕೆಲಹೊತ್ತು ಚರ್ಚಿಸಿ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಿದ್ದರು. ಇದೇ ವೇಳೆ, ಡಿ.15 ರ ನಂತರ ರಾಜ್ಯ ಪ್ರವಾಸ ಮಾಡಿ ನಿರ್ಧಾರ ತಿಳಿಸಲಾಗುವುದು ಎಂದು ಇಬ್ರಾಹಿಂ ಹೇಳಿದ್ದರು.

ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಬೆನ್ಸನ್ ಟೌನ್​​ನಲ್ಲಿರುವ ಸಿಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದರು. ಕಾಂಗ್ರೆಸ್‌ ಪಕ್ಷ ತೊರೆಯದಂತೆ ಇಬ್ರಾಹಿಂ ಅವರಿಗೆ ಡಿಕೆಶಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ದೇವೇಗೌಡರನ್ನು ಇಬ್ರಾಹಿಂ ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.

ABOUT THE AUTHOR

...view details