ಕರ್ನಾಟಕ

karnataka

ETV Bharat / state

13 ಮಂದಿ ಸಂಸದರ ತೇಜೋವಧೆಗೆ ಯತ್ನ: ಹೈಕಮಾಂಡ್ ಮಧ್ಯಪ್ರವೇಶಕ್ಕೆ ಡಿವಿಎಸ್ ಆಗ್ರಹ - Former Union Minister DV Sadananda Gowda

ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದೆ. ಈ ಹಂತದಲ್ಲಿರುವಾಗಲೇ ಸಂಸದರನ್ನು ತೇಜೋವಧೆ ಮಾಡುವ ಕೆಲಸವಾಗುತ್ತಿದೆ ಎಂದು ಮಾಜಿ‌ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ದೂರಿದ್ದಾರೆ.

DV Sadananda Gowda
ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ

By

Published : Jun 6, 2023, 2:29 PM IST

ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರದ ಸಂಸದ ಹಾಗೂ ಮಾಜಿ‌ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದೆ. ಈ ಹಂತದಲ್ಲಿರುವಾಗಲೇ ಸಂಸದರನ್ನು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಮಾನಹಾನಿ ಹಿಂದೆ ಯಾರಿದ್ದಾರೋ ಗೊತ್ತಿಲ್ಲ. ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಮಂದಿ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಮಾಡಿಲ್ಲ. ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ.‌ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ರೀತಿಯಲ್ಲಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ:’ತೇಜೋವಧೆ ಆಗೋ ಸಾಧ್ಯತೆ ಇರೋದರಿಂದ ಕೋರ್ಟ್ ಮೊರೆ ಹೋಗಿದ್ದಾರೆ’: ಸಚಿವ ಬೊಮ್ಮಾಯಿ

ಮತದಾರರಿಂದ ಆಯ್ಕೆಗೊಂಡ ಸಂಸದರನ್ನು ತೇಜೋವಧೆ ಮಾಡುವ ಕೆಲಸ‌ ಎಷ್ಟು ಸರಿ? ಈ ಬಗ್ಗೆ ನನಗೆ 12 ಮಂದಿ ಸಂಸದರು ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯ ಬಿಜೆಪಿ ನಾಯಕರು‌ ಈ ಬಗ್ಗೆ ಇತಿಶ್ರೀ ಹಾಡಬೇಕಿದೆ. ಹಲವು ವಿಚಾರಗಳ ಬಗ್ಗೆ ತ್ವರಿತವಾಗಿ ಪ್ರಕಟಣೆ ಅಥವಾ ಸ್ಪಷ್ಟನೆ ನೀಡುವ ಬಿಜೆಪಿ ನಾಯಕರು, 13 ಮಂದಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದು ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ. ಆಗುತ್ತಿರುವ ಗೊಂದಲಕ್ಕೆ ಕೂಡಲೇ ಪರಿಹರಿಸುವ ಕೆಲಸವನ್ನು ಸಂಬಂಧಪಟ್ಟ ನಾಯಕರು ಮಾಡಬೇಕಿದೆ ಎಂದು ಆಗ್ರಹಿಸಿದರು.

ಸೋಲು ಹೊಸದೇನಲ್ಲ:ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಮತದಾರರು ಕಾಂಗ್ರೆಸ್​​ಗೆ ಜನಾದೇಶ ನೀಡಿದ್ದಾರೆ. ಆಗಿರುವ‌ ಲೋಪ ಸರಿಪಡಿಸಿಕೊಳ್ಳಬೇಕಿದೆ. ಸೋಲು ಕಂಡಾಗ ಆತ್ಮಾವಲೋಕನ ಮಾಡಿಕೊಳ್ಳುವುದು ವಾಡಿಕೆಯಿದೆ. ಇಂದಿನ ದಿನಗಳಲ್ಲಿ ಆತ್ಮಾಲೋಕನ ಮಾಡಿಕೊಳ್ಳುವುದಕ್ಕೆ ಆತ್ಮಗಳೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ದಾಖಲೆಗಳಿಲ್ಲದೇ ಒಬ್ಬ ವ್ಯಕ್ತಿಯ ತೇಜೋವಧೆ ಮಾಡುವುದು ಕಾಂಗ್ರೆಸ್​ಗೆ ಮರ್ಯಾದೆ ಅಲ್ಲ: ಅಶ್ವತ್ಥ ನಾರಾಯಣ್

ಚುನಾವಣಾ ಸೋಲು ನಮಗೇನು ಹೊಸದೇನೆಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡ ಸೋಲು ಕಂಡಿದ್ದರು. ಅನಂತರ ಗೆದ್ದಿದ್ದು ಇತಿಹಾಸ. ಸೋಲಿನಿಂದ ಕಾರ್ಯಕರ್ತರು ದೃತಿಗೆಡುವ ಅಗತ್ಯವಿಲ್ಲ. ನಮಗೆ ತಾತ್ಕಾಲಿಕ ಹಿನ್ನೆಡೆಯಾಗಿದೆ. ಕಾರ್ಯಕರ್ತರ ಮನೋಬಲ ಕುಸಿಯದಂತೆ ನೋಡಿಕೊಳ್ಳುವುದು ರಾಜ್ಯ ಬಿಜೆಪಿ ನಾಯಕರ ಕೆಲಸವಾಗಿದ್ದು, ಅದನ್ನ ಮಾಡುವ ಕೆಲಸ ಆಗಬೇಕಿದೆ. ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಕಾರ್ಯ ವೈಖರಿ ಬಗ್ಗೆ ಕಾದು ನೋಡಿ ಅನಂತರವಷ್ಟೇ ಮುಂದಿನ ಹೋರಾಟಗಳಿಗೆ ಕಾರ್ಯಕರ್ತರನ್ನ ಅಣಿಗೊಳಿಸುವ ಕೆಲಸ ಮಾಡಬೇಕಿದೆ. ಅಲ್ಲಿವರೆಗೂ ತಾಳ್ಮೆಯಿಂದ‌ ಇರುಬೇಕು ಎಂದು ಡಿವಿಎಸ್ ಕಿವಿಮಾತು ಹೇಳಿದರು.

ಇದನ್ನೂ ಓದಿ:ಫೋಟೋದಿಂದ ತೇಜೋವಧೆ ಮಾಡಿದರೆ ಏನೂ ಲಾಭವಿಲ್ಲ: ಸಚಿವ ಆರಗ ಜ್ಞಾನೇಂದ್ರ

ABOUT THE AUTHOR

...view details