ಬೆಂಗಳೂರು:ವಿಳಾಸ ಕೇಳುವ ನೆಪದಲ್ಲಿ ರಾತ್ರಿ ವೇಳೆ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಚಾಕು ತೋರಿಸಿ ಫೋನ್ ಸೇರಿದಂತೆ ಬೈಕ್ ಎಟಿಎಂ ಕಾರ್ಡ್ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಲಿಗೆಗೆ ಒಳಗಾಗಿದ್ದ ಮೊಹಮ್ಮದ್ ಫೈದಲ್ ದೂರು ನೀಡಿದ ಹಿನ್ನೆಲೆ ಆರೋಪಿಗಳಾದ ರವಿಕುಮಾರ್, ಅಮೀನ್ ಹಾಗೂ ಪ್ರಶಾಂತ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 16 ಲಕ್ಷ ಬೆಲೆ ಬಾಳುವ ಯಮಹಾ ಬೈಕ್ ಸೇರಿ ಒಂದು ಆ್ಯಪಲ್ ಪೋನ್ ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನವೆಂಬರ್ 28ರಂದು ಮೊಹಮ್ಮದ್ ಫೈದಲ್ ಸ್ನೇಹಿತನೊಂದಿಗೆ ವೈಟ್ ಫೀಲ್ಡ್ ಗೆ ಹೋಗುತ್ತಿದ್ದ ಮಾರ್ಗ ಮಧ್ಯೆ ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದ ಆರೋಪಿಗಳು, ಚಾಕು ತೋರಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಫೋನ್, ಬೈಕ್ ಹಾಗೂ ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ನಂತರ ಆತಂಕಕ್ಕೊಳಗಾಗಿ ಫೈದಲ್ ಓಡಿ ಹೋಗಿದ್ದರು.
ಈ ಸಂಬಂಧ ಮೊಹಮ್ಮದ್ ಫೈದಲ್ ದೂರು ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಕಾರ್ಯಾಚರಣೆ ಕೈಗೊಂಡ ಪೊಲೀಸರು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ವಿಳಾಸ ಕೇಳುವ ನೆಪದಲ್ಲಿ ಸಾರ್ವಜನಿಕರಿಂದ ಬೈಕ್, ಮೊಬೈಲ್ ಹಾಗೂ ಪರ್ಸ್ಗಳನ್ನು ಸುಲಿಗೆ ಮಾಡುವ ಪ್ರವೃತ್ತಿ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಂಕೆ ಚರ್ಮ ಕೊಂಬು ಮಾರಾಟ, ಆರೋಪಿ ಸೆರೆ:ನಗರದಲ್ಲಿ ಜೆಂಕೆ ಚರ್ಮ ಹಾಗೂ ಕೊಂಬು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಸಾಗರ ಮೂಲದ ಚಂದ್ರಶೇಖರಪ್ಪ ಎಂಬಾತನು ಬಂಧಿತ ಆರೋಪಿ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಜೆಂಕೆ ಚರ್ಮ ಹಾಗೂ ಕೊಂಬುಗಳ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.