ಬೆಂಗಳೂರು: ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಡಿ.ಎ ಕಾಂಪ್ಲೆಕ್ಸ್ ಬಳಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ನಾಲ್ವರ ಬಂಧನ - ಬೆಂಗಳೂರು ಕ್ರಿಕೆಟ್ ಬೆಟ್ಟಿಂಗ್
ಐಪಿಎಲ್ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೂರ್ವ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
Arrest
ನಯೀಮ್, ಸುಬ್ಬಯ್ಯ, ಪಾರೂಕ್, ಏಜಾಜ್, ಅಲೆಕ್ಸಾಂಡರ್ ಬಂಧಿತ ಆರೋಪಿಗಳಾಗಿದ್ದು, ಇವರು ಮೊಬೈಲ್ ಮುಖಾಂತರ ಬುಕ್ಕಿಗಳನ್ನು ಸಂಪರ್ಕ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರೋಪಿಗಳಿಂದ ಒಟ್ಟು 56 ಸಾವಿರ ರೂ. ನಗದು, 5 ಮೊಬೈಲ್ ಜಪ್ತಿ ಮಾಡಿಕೊಂಡು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.