ಬೆಂಗಳೂರು :ಎರಡು ಪ್ರತ್ಯೇಕ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ರಾಜಾಜಿನಗರ ಮತ್ತು ಜೆಸಿ ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ 1 :ರಾಜಾಜಿನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 4.15 ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳು ಸೇರಿದಂತೆ ಒಂದು ಡ್ರ್ಯಾಗರ್‌ನ ವಶಕ್ಕೆ ಪಡೆದಿದ್ದಾರೆ. ಇಬ್ಬರು ಬಂಧಿತರ ಹೆಸರನ್ನು ಗೌಪ್ಯವಾಗಿಡಲಾಗಿದ್ದು, ಆರೋಪಿಗಳು ಜುಲೈ 10ರಂದು ರಾಜಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿ ಪ್ರಕಾಶ್ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದರು.
ಅನುಮಾನಗೊಂಡ ಪೊಲೀಸ್ ಸಿಬ್ಬಂದಿ ಹಿಂಬಾಲಿಸಿ ಪರಿಶೀಲಿಸಿದಾಗ ಡ್ರ್ಯಾಗರ್ ಪತ್ತೆಯಾಗಿದೆ. ಠಾಣೆಗೆ ಕರೆತಂದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಮುಖ್ಯವಾಗಿ ಆರೋಪಿಗಳಿಂದ ಬಸವೇಶ್ವರನಗರ, ಯಲಹಂಕ ನ್ಯೂಟೌನ್ ವ್ಯಾಪ್ತಿಯಲ್ಲಿ ಎರಡು ಬೈಕ್ ರಿಕವರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.