ಕರ್ನಾಟಕ

karnataka

ETV Bharat / state

ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು‌ ಪೊಲೀಸ್​ ವಶಕ್ಕೆ

ನಿನ್ನೆ ರಾತ್ರಿ‌ ಭಾರತ ಹಾಗೂ ಶ್ರೀಲಂಕಾ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದಾಗ ವಿರಾಟ್ ಕೊಹ್ಲಿ ಬಳಿ ಓಡಿ ಹೋಗಿ ಸೆಲ್ಫಿ ತೆಗೆದುಕೊಂಡಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ..

ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು‌ ಯುವಕರು
ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು‌ ಯುವಕರು

By

Published : Mar 14, 2022, 11:56 AM IST

ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಪಿಂಕ್ ಬಾಲ್‌ ಟೆಸ್ಟ್ ಪಂದ್ಯಾವಳಿ ವೇಳೆ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ, ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ರಾತ್ರಿ‌ ಪಂದ್ಯ ನಡೆಯುತ್ತಿರುವಾಗಲೇ ಕಲಬುರಗಿಯ ಓರ್ವ ಯುವಕ ಹಾಗೂ ಬೆಂಗಳೂರಿನ ಮೂವರು ಸೆಲ್ಫಿ ತೆಗೆದುಕೊಂಡಿದ್ದರು. ಫಿಲ್ಡೀಂಗ್ ಮಾಡುವಾಗ ವಿರಾಟ್ ಕೊಹ್ಲಿ ಬಳಿ ಓಡಿ ಹೋದ ನಾಲ್ವರು ಸೆಲ್ಫಿಗೆ ಮುಗಿಬಿದ್ದಿದ್ದರು‌.‌ ಅಭಿಮಾನಿಗಳಿಗೆ ನಿರಾಶೆ ಮಾಡದೆ ಕೊಹ್ಲಿ‌ ಫೋಟೋಗೆ ಪೋಸ್ ಕೊಟ್ಟಿದ್ದರು.‌

ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು‌ ಯುವಕರು..

ಕೂಡಲೇ ಎಚ್ಚೆತ್ತುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಅತಿಕ್ರಮ ಪ್ರವೇಶ ಮತ್ತು ನಿಯಮ ಉಲ್ಲಂಘನೆ ಹಿನ್ನೆಲೆ ‌ಕ್ರೀಡಾಂಗಣದ ಒಳಗೆ ಹೋಗಿ ನಾಲ್ವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ವರ ಪೈಕಿ ಇಬ್ಬರು ಮೈನರ್ ಆಗಿದ್ದಾರೆ.

ಇದನ್ನೂ ಓದಿ:ನಿರ್ಗತಿಕ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಾರ್ಡನ್​​​!

ABOUT THE AUTHOR

...view details