ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ನಾಲ್ಕು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಕೊರೊನಾ ಸೋಂಕಿತರ ವಿವರ ಹೀಗಿದೆ:
102ನೇ ಸೋಂಕಿತ ವ್ಯಕ್ತಿ ಬೆಂಗಳೂರಿನ ನಿವಾಸಿಯಾಗಿದ್ದು, ನಗರದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ನಿಗಾ ವಹಿಸಲಾಗಿದೆ. 103ನೇ ಸೋಂಕಿತ 37 ವರ್ಷದ ಮೈಸೂರಿನ ನಂಜನಗೂಡು ನಿವಾಸಿಯಾಗಿದ್ದು ಪ್ರಾಥಮಿಕ ತನಿಖೆ ಪ್ರಕಾರ, ಔಷಧ ತಯಾರಿಕಾ ಕಂಪನಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ. ಈ ವ್ಯಕ್ತಿಯನ್ನು ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.