ಬೆಂಗಳೂರು: ಹೊರ ರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ನಿರತನಾಗಿದ್ದ ಆರೋಪಿಯನ್ನು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ.
ಶರತ್ ಕುಮಾರ್ ಬಂಧಿತ ಆರೋಪಿ.
ಬೆಂಗಳೂರು: ಹೊರ ರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ನಿರತನಾಗಿದ್ದ ಆರೋಪಿಯನ್ನು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ.
ಶರತ್ ಕುಮಾರ್ ಬಂಧಿತ ಆರೋಪಿ.
ಈತ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯೂನಿಸೆಕ್ಸ್ ಸೆಲೂನ್ ಆ್ಯಂಡ್ ಸ್ಪಾದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದ. ಈ ಬಗ್ಗೆ ಸುಳಿವು ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಆರೋಪಿ, ಯುವತಿಯರನ್ನು ಬೆಂಗಳೂರು ನಗರ ಮತ್ತು ಹೊರ ರಾಜ್ಯಗಳಿಂದ ಕರೆತಂದು ಹೆಚ್ಚು ಹಣ ನೀಡುವುದಾಗಿ ಭರವಸೆ ನೀಡಿ ಕೆಲಸಕ್ಕೆಂದು ಕರೆಸುತ್ತಿದ್ದ. ನಂತರ ಗಿರಾಕಿಗಳನ್ನು ಸ್ಪಾಗೆ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಕಲಂ 3,4,5 ಮತ್ತು 6 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.