ಬೆಂಗಳೂರು: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಸಿಟಿ ಮಾರ್ಕೆಟ್ ಪೊಲೀಸರು, ವಿಚಾರಣೆ ನಡೆಸಿದಾಗ ಅವರೆಲ್ಲ ಕಳ್ಳತನದಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ದೊರಕಿದೆ.
ನಾಲ್ವರು ಕಳ್ಳತನ ಆರೋಪಿಗಳ ಬಂಧನ; 28 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್ - City Market Police Station
ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸರು ನಾಲ್ವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರ ಬಂಧನ
ಜಿತೇಂದ್ರಕುಮಾರ್, ಪ್ರಕಾಶ್, ಅಮರರಾಮ್, ರಮೇಶ್ ಕುಮಾರ್ ಬಂಧಿತ ಆರೋಪಿಗಳು. ವಿಚಾರಣೆ ವೇಳೆ ಬೆಂಗಳೂರು, ದಾವಣಗೆರೆಯಲ್ಲಿ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ ಒಟ್ಟು 28 ಲಕ್ಷ ಮೌಲ್ಯದ 2 ಇಕೋ ಕಾರು, 20 ಬಾಕ್ಸ್ ಸಿಗರೇಟ್ ಮತ್ತು 20 ಸಾವಿರ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಸಿಟಿ ಮಾರ್ಕೆಟ್, ವಿಲ್ಸನ್ ಗಾರ್ಡನ್, ದಾವಣಗೆರೆ, ಹಾವೇರಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿರುವ ಬಗ್ಗೆ ದೂರು ದಾಖಲಾಗಿವೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕೆಆರ್ ಮಾರ್ಕೆಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.