ಬೆಂಗಳೂರು: ಪ್ರೇಮದ ಬಲೆ ಬೀಸಿ ಯುವತಿಯರನ್ನು ಪ್ರೀತಿಯಲ್ಲಿ ಬೀಳಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಬ್ಲ್ಯಾಕ್‍ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದವನನ್ನು ನಗರದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿರುವುದು ಬೆಳಕಿಗೆ ಬಂದಿದೆ.
ಬ್ಯಾಡರಹಳ್ಳಿಯ ರಾಕೇಶ್ (26) ಬಂಧಿತ ಆರೋಪಿಯಾಗಿದ್ದಾನೆ. ಆತನಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಮೊಬೈಲ್ ಪರಿಶೀಲಿಸಿದಾಗ ಬರೋಬ್ಬರಿ ಆರು ಯುವತಿಯರ ಖಾಸಗಿ ದೃಶ್ಯ ಸೆರೆ ಹಿಡಿದು ಹಿಂಸಿಸುತ್ತಿದ್ದ ಎಂಬುದು ಬಯಲಾಗಿದೆ. ದೂರುದಾರೆ 24 ವರ್ಷದ ಸಂತ್ರಸ್ತೆ ನಗರದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಆಕೆಗೆ ಆರೋಪಿ ರಾಕೇಶ್‍ನ ಪರಿಚಯವಾಗಿತ್ತು. ರಾಕೇಶ್ ಪ್ರೀತಿಸುವುದಾಗಿ ಹೇಳಿ ಸಂತ್ರಸ್ತೆಗೆ ಪ್ರೇಮ ನಿವೇದನೆ ಮಾಡಿದ್ದ. ಆತ ನಿಜವಾಗಿಯೂ ಪ್ರೀತಿಸುತ್ತಿದ್ದಾನೆಂದು ಭಾವಿಸಿದ ಯುವತಿ, ಆತನ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡಿದ್ದಳು. ನಂತರ ಇಬ್ಬರೂ ವಾಟ್ಸ್ಯಾಪ್‍ನಲ್ಲಿ ಚಾಟಿಂಗ್ ಮಾಡಿಕೊಂಡು ಸಲುಗೆ ಬೆಳೆಸಿಕೊಂಡಿದ್ದರೆಂದು ಎಂದು ಪೊಲೀಸರು ಹೇಳಿದ್ದಾರೆ.
ಖಾಸಗಿ ದೃಶ್ಯ ಸೆರೆ, ಹಣಕ್ಕೆ ಡಿಮ್ಯಾಂಡ್:
ಸಲುಗೆ ಬೆಳೆದ ನಂತರ ಕೆಲವು ದಿನಗಳ ಹಿಂದೆ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ ಆಕೆಯ ಗಮನಕ್ಕೆ ಬಾರದಂತೆ ತನ್ನ ಮೊಬೈಲ್‍ನಲ್ಲಿ ಖಾಸಗಿ ದೃಶ್ಯ ಸೆರೆ ಹಿಡಿದಿದ್ದ. ಕೆಲ ದಿನಗಳ ಬಳಿಕ ಯುವತಿಯ ವಾಟ್ಸಪ್ಗೆೆ ಖಾಸಗಿ ದೃಶ್ಯ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದ. ಆತಂಕಗೊಂಡ ಯುವತಿ ಆರೋಪಿಗೆ ಹಂತ ಹಂತವಾಗಿ ಒಟ್ಟು 2 ಲಕ್ಷ ರೂಗಳಿಗೂ ಅಧಿಕ ಹಣ ನೀಡಿದ್ದಳು. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ಕಂಗಾಲಾದ ಸಂತ್ರಸ್ತೆ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದಳು.
ಹಲವು ಯುವತಿಯರಿಗೆ ವಂಚನೆ: