ಬೆಂಗಳೂರು :ಆ್ಯಂಬಿಡೆಂಟ್, ಅಜ್ಮೇರಾ ಗ್ರೂಪ್ಸ್ ಹಾಗೂ ಇಂಜಾಸ್ ಇಂಟರ್‌ನ್ಯಾಷನಲ್ ಸೇರಿದಂತೆ ಹೂಡಿಕೆದಾರರಿಗೆ ವಂಚನೆ ಮಾಡಿದ ಆರೋಪ ಹೊತ್ತಿರುವ 9 ಸಂಸ್ಥೆಗಳ ವಿರುದ್ಧ ಸಕ್ಷಮ ಪ್ರಾಧಿಕಾರಗಳು ಕೈಗೊಂಡಿರುವ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿದೆ.
ಈ ಕುರಿತಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಆ್ಯಂಬಿಡೆಂಟ್, ಅಜ್ಮೇರಾ ಸೇರಿದಂತೆ ವಂಚಕ ಕಂಪನಿಗಳ ಆಸ್ತಿ ಜಪ್ತಿ ಹಾಗೂ ಹೂಡಿಕೆದಾರರ ಹಣ ವಾಪಸ್ ಮಾಡುವ ವಿಚಾರದಲ್ಲಿ ಸಕ್ಷಮ ಪ್ರಾಧಿಕಾರಗಳನ್ನು ನೇಮಕ ಮಾಡಲಾಗಿದೆ.