ಬೆಂಗಳೂರು: ಕೋವಿಡ್ ರೋಗಿಗಳಿಗೆ ರಾಜ್ಯ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದೆ. ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳಿಗೆ ನಿಗದಿತ ದರದಲ್ಲಿ ವೆಚ್ಚ ಭರಿಸುತ್ತಿದೆ. ಮೊದಲ ಅಲೆಯಿಂದ ಹಿಡಿದು ಎರಡನೇ ಅಲೆವರೆಗೆ ಕೋವಿಡ್ ಸೋಂಕಿತರಿಗೆ ಸರ್ಕಾರಿ ಕೋಟಾದಡಿ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ಕೋಟ್ಯಂತರ ರೂ. ಚಿಕಿತ್ಸಾ ವೆಚ್ಚವನ್ನು ಸರ್ಕಾರ ಪಾವತಿಸಬೇಕಾಗಿದೆ.
ಕೋವಿಡ್ ಮಹಾಮಾರಿ ರಾಜ್ಯವನ್ನು ಸಂಪೂರ್ಣವಾಗಿ ಮಂಡಿಯೂರುವಂತೆ ಮಾಡಿತ್ತು. ಮೊದಲ ಅಲೆಯಿಂದ ಚೇತರಿಸಿ ನಿಟ್ಟುಸಿರುಬಿಡುತ್ತಿದ್ದ ಹಾಗೆಯೇ, ಎರಡನೇ ಅಲೆ ರಾಜ್ಯವನ್ನು ಸಂಪೂರ್ಣವಾಗಿ ನೆಲಕಚ್ಚುವಂತೆ ಮಾಡಿತು. ಕೋವಿಡ್ನ ಭೀಕರತೆ ರಾಜ್ಯವನ್ನು ಕಂಗೆಡಿಸಿಬಿಟ್ಟಿತ್ತು. ಕೋವಿಡ್ ಮಹಾಮಾರಿಗೆ ಸೋಂಕಿತರಾದ ರಾಜ್ಯದ ಜನರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿತ್ತು. ಅದರಂತೆ ಬಿಬಿಎಂಪಿ, ಸ್ಥಳೀಯ ಆಡಳಿತದಿಂದ ರೆಫರ್ ಮಾಡಲಾದ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿತ್ತು. ಹೀಗಾಗಿ ರಾಜ್ಯಲ್ಲಿ ಕೋವಿಡ್ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಇದರಿಂದ ಸರ್ಕಾರದ ಮೇಲೆ ಭಾರಿ ಹೊರೆ ಬೀಳುತ್ತಿದೆ. ರಾಜ್ಯದ ಜನರ ಆರೋಗ್ಯ ಮೊದಲ ಆದ್ಯತೆಯಾಗಿರುವುದರಿಂದ ಸರ್ಕಾರ ಈ ಭಾರಿ ಹೊರೆಯನ್ನು ಭರಿಸಲೇಬೇಕಾದ ಅನಿವಾರ್ಯ. ಹೀಗಾಗಿನೇ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಚಿಕಿತ್ಸೆ ಪಡೆದ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಚಿಕಿತ್ಸಾ ವೆಚ್ಚವನ್ನು ಸರ್ಕಾರ ನಿಗದಿ ಮಾಡಿದೆ. ಅದರನ್ವಯ ಕೋವಿಡ್ ಸೋಂಕಿತರಿಗೆ ನೀಡಿದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಕೋಟಿ ಕೋಟಿ ಹಣವನ್ನು ಪಾವತಿಸಬೇಕಾಗಿದೆ.
ಸರ್ಕಾರದ ಮೇಲೆ ಬಿದ್ದ ಕೋವಿಡ್ ಚಿಕಿತ್ಸಾ ವೆಚ್ಚ ಎಷ್ಟು?:
ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಸರ್ಕಾರ ಉಚಿತವಾಗಿನೇ ಚಿಕಿತ್ಸೆ ನೀಡಿದೆ. ಹೀಗಾಗಿ ಸರ್ಕಾರದ ಮೇಲೆ ಭರಿಸಬೇಕಾದ ಚಿಕಿತ್ಸಾ ವೆಚ್ಚದ ಹೊರೆ ದೊಡ್ಡ ಪ್ರಮಾಣದಲ್ಲಿದೆ.