ಕರ್ನಾಟಕ

karnataka

ETV Bharat / state

ಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ - Department of Social Welfare

ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಯುಪಿಎಸ್​ಸಿ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಪಡೆಯಲು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಬುಧವಾರ ಕೌನ್ಸಿಲಿಂಗ್ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

By

Published : Oct 24, 2019, 8:14 AM IST

ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಯುಪಿಎಸ್​ಸಿ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಪಡೆಯಲು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಬುಧವಾರ ಕೌನ್ಸಿಲಿಂಗ್ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೌನ್ಸಿಲಿಂಗ್ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಬಳಿಕ ಸಮಾಜ ಕಲ್ಯಾಣ ಇಲಾಖೆಯ ಬಿ.ಕುಮಾರ್ ಮಾತನಾಡಿ,ಯುಪಿಎಸ್​ಸಿಯಲ್ಲಿ 650 ಹಾಗೂ ಕೆಎಎಸ್​ಗೆ 502 ಅಭ್ಯರ್ಥಿಗಳನ್ನು 9 ತಿಂಗಳು ಹಾಗೂ 7 ತಿಂಗಳ ತರಬೇತಿಗೆ ಆಯ್ಕೆ ಮಾಡಲಾಗುವುದು. ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಲಾಗುವುದು. ಯುಪಿಎಸ್​ಸಿ ಕೋಚಿಂಗ್​ಗೆ ದೆಹಲಿ,ಹೈದರಾಬಾದ್,ಚೆನ್ನೈ ಹಾಗೂ ಬೆಂಗಳೂರಿನ 11 ವಿದ್ಯಾ ಸಂಸ್ಥೆಗಳಿಗೆ ಹಾಗೂ ಕೆಎಎಸ್​ಗೆ 19 ವಿದ್ಯಾ ಸಂಸ್ಥೆಗಳಿಗೆ ಆಯ್ಕೆ ಮಾಡಿ ಕಳಿಸಲಾಗುವುದು ಎಂದರು.

ಆಯ್ಕೆ ಪ್ರಕ್ರಿಯೆಯಲ್ಲಿ ಯುಪಿಎಸ್​ಸಿ,ಸಿಇಟಿ ಕೋಚಿಂಗ್ ಕ್ಲಾಸ್​ನಲ್ಲಿ ಪಡೆದ ಮೆರಿಟ್ ಹಾಗೂ ದಿವ್ಯಾಂಗ,ಸಫಾಯಿ ಕರ್ಮಚಾರಿ,ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ,ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಮಹಿಳಾ ಮೀಸಲಾತಿಯಡಿ ಒಟ್ಟು ಶೇಕಡಾ 60ರಷ್ಟು ಮೀಸಲಾತಿ ಹಾಗೂ ಮೆರಿಟ್ ಆಧಾರದಲ್ಲಿ ಆಯ್ಕೆಮಾಡಲಾಗುವುದು ಎಂದರು.

ಪೂರ್ವಭಾವಿ ತರಬೇತಿಗಳ ಕುರಿತು ಕೌನ್ಸೆಲಿಂಗ್ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆ ಕೋರ್ಸ್ ಫೀಜ್​ಗಳನ್ನು ತುಂಬಲಿದೆ. 1.90,000 ಕೋರ್ಸ್ ಫೀಸ್ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಶಿಷ್ಯ ವೇತನವಾಗಿ 10 ಸಾವಿರ ನೀಡಲಾಗುವುದು ಎಂದರು.

ABOUT THE AUTHOR

...view details