ಕರ್ನಾಟಕ

karnataka

ETV Bharat / state

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸ್ವಾತಂತ್ರ್ಯ ದಿನದಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ - BMTC Free travel

ಸರ್ಕಾರ ಸ್ವಾತಂತ್ರ್ಯ ದಿನದಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

Free travel in BMTC on Independence Day
ಸ್ವಾತಂತ್ರ್ಯ ದಿನದಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

By

Published : Aug 11, 2022, 1:54 PM IST

ಬೆಂಗಳೂರು: ಸ್ವಾತಂತ್ರ್ಯ ದಿನದಂದು ಬಿಎಂಟಿಸಿ ಬಸ್​ನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ನೀಡಿದೆ. ಬಿಎಂಟಿಸಿ ರಜತ ಮಹೋತ್ಸವ ದಿನಾಚರಣೆಯ ನಿಟ್ಟಿನಲ್ಲಿ ಆಗಸ್ಟ್ 15 ರಂದು ಒಂದು ದಿನ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಪಯಾಣಿಸುವ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಉಚಿತ ಪ್ರಯಾಣಕ್ಕೆ ಅನುಮತಿ ನೀಡುವಂತೆ ಬಿಎಂಟಿಸಿ ಎಂಡಿ ಸರ್ಕಾರದ ಅನುಮೋದನೆ ಕೋರಿದ್ದರು.

ಬಿಎಂಟಿಸಿ ಸಂಸ್ಥೆ 25 ವರ್ಷ ಪೂರೈಸಿದ ಹಿನ್ನೆಲೆ ರಜತ ಮಹೋತ್ಸವವನ್ನು ಆಚರಿಸಲು, ಆಗಸ್ಟ್-15ರ ಸ್ವಾತಂತ್ರ್ಯೋತ್ಸವ ದಿನದಂದು ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಸರ್ಕಾರದ ಅನುಮೋದನೆ ನೀಡಿದೆ.

ಇದನ್ನೂ ಓದಿ:ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಬಲಶಾಲಿ

ABOUT THE AUTHOR

...view details