ಕರ್ನಾಟಕ

karnataka

ETV Bharat / state

ದ.ಕನ್ನಡದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ - Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸ ಸೌಧದಲ್ಲಿ ಇಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಜೊತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತುರ್ತುಸಭೆ ನಡೆಸಿದ್ರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ

By

Published : Jul 17, 2020, 9:13 PM IST

Updated : Jul 17, 2020, 9:34 PM IST

ಬೆಂಗಳೂರು: ಕೋವಿಡ್-19ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲು 25 ಸಾವಿರ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್​​ಗಳನ್ನು ಜಿಲ್ಲೆಗೆ ಸರಬರಾಜು ಮಾಡಲಾಗುವುದು. 15 ಆ್ಯಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು. ಕೊರೊನಾ ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು, ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ

ಈ ಮಹತ್ವದ ಸಭೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಪೀಡಿತರ ಸಮಸೈಗಳು ಪರಿಹಾರ ಆಗಲಿವೆ. ಜಿಲ್ಲೆಯ ನೆರವಿಗೆ ಬಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಇನ್ಮುಂದೆ ಕೋವಿಡ್ ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್ ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಭರವಸೆ ನೀಡಿದ್ರು. ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Last Updated : Jul 17, 2020, 9:34 PM IST

ABOUT THE AUTHOR

...view details