ಬೆಂಗಳೂರು:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪರವಾಗಿ ಇಂದು ಸಿಎಂ ಭೇಟಿ ಮಾಡಿದ್ರು.
ಸಿಎಂ ಭೇಟಿ ಮಾಡಿದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ: ವಸತಿ ವಂಚಿತರ ಹಕ್ಕಿಗೆ ಮನವಿ - ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ
ಹೆಚ್.ಎಸ್. ದೊರೆಸ್ವಾಮಿ ಅವರು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪರವಾಗಿ ಇಂದು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಸಿಎಂ ಭೇಟಿ ಮಾಡಿದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ದೊರೆಸ್ವಾಮಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ಮುಖ್ಯಮಂತ್ರಿ ಜೊತೆ ಮಾತನಾಡಿ, ಅವರಿಗೆ ಭೂಮಿ ಹಾಗೂ ವಸತಿಯನ್ನು ಸರ್ಕಾರ ನೀಡಿ ನ್ಯಾಯ ಒದಗಿಸಬೇಕು ಎಂದು ದೊರೆಸ್ವಾಮಿ ಒತ್ತಾಯಿಸಿದರು.