ಬೆಂಗಳೂರು:ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದ ಹಿನ್ನೆಲೆ, ನಾಳೆಯಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ನಾಳೆಯಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಸೇವೆ ಸ್ಥಗಿತ - ಆಶಾ ಕಾರ್ಯಕರ್ತೆಯರ ಬೇಡಿಕೆ
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಟಿಯುಸಿ ವತಿಯಿಂದ ಈ ಪ್ರತಿಭಟನೆ ನಡೆಯುತ್ತಿದೆ. ಮಾಸಿಕ ಗೌರವ ಧನ 12 ಸಾವಿರ ರೂ.ಗೆ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನಿಟ್ಟು ಧರಣಿ ನಡೆಸಲು ನಿರ್ಧರಿಸಿದ್ದಾರೆ.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಟಿಯುಸಿ ವತಿಯಿಂದ ಈ ಪ್ರತಿಭಟನೆ ನಡೆಯುತ್ತಿದೆ. ಮಾಸಿಕ ಗೌರವ ಧನ 12 ಸಾವಿರ ರೂ.ಗೆ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನಿಟ್ಟು ಧರಣಿ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರಕ್ಕೆ 10 ಬಾರಿ ಮನವಿ ಪತ್ರ ಬರೆದರೂ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ನಾಳೆ ಬೆಳಗ್ಗೆಯಿಂದಲೇ ಆರೋಗ್ಯ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಕೊರೊನಾ ಕಷ್ಟದ ಸಮಯದಲ್ಲೂ ಮನೆ ಮನೆಗೆ ತೆರಳಿ, ಸರ್ವೇ ಮಾಡಿ ಜೀವ ಪಣಕಿಟ್ಟು ದುಡಿದಿದ್ದಾರೆ. ಸರ್ಕಾರ ನಮ್ಮ ಬೆಂಬಲಕ್ಕೆ ನಿಲ್ಲದಿರುವುದು ದುಃಖದ ಸಂಗತಿ ಎಂದು ಸಂಘದ ರಾಜ್ಯ ಕಾರ್ಯದರ್ಶಿ, ಡಿ ನಾಗಲಕ್ಷ್ಮಿ ತಿಳಿಸಿದರು.