ಬೆಂಗಳೂರು : ಮಳೆ ಅನಾಹುತಗಳು ಸಂಭವಿಸಿದಾಗ ಸ್ಥಳಾಂತರ ಮಾಡಿದವರಿಗೆ ಗಂಜಿ ಕೇಂದ್ರಗಳಲ್ಲಿ ಮಾಮೂಲಿ ಊಟ ನೀಡಲಾಗುತ್ತಿತ್ತು. ಆದರೆ, ಇನ್ಮುಂದೆ ಈ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಗಂಜಿ ಕೇಂದ್ರ ವ್ಯವಸ್ಥೆಯನ್ನ ಸಂಪೂರ್ಣವಾಗಿ ಬದಲಿಸಲಾಗುತ್ತಿದ್ದು, ಪ್ರತಿ ದಿನ ತರಹೇವಾರಿ ಉಪಹಾರ, ಚಪಾತಿ, ಪಲ್ಯ, ಹಪ್ಪಳ, ಮೊಟ್ಟೆ ನೀಡಲು ಆದೇಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 20 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ನಡೆಸಿದ ವಿಡಿಯೋ ಸಂವಾದ ಕುರಿತಂತೆ ಮಾಹಿತಿ ನೀಡಿದ ಅವರು, ಮಂಡ್ಯ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಎರಡರಿಂದ ಮೂರು ತಿಂಗಳಲ್ಲಿ ಎಲ್ಲಾ ಜಲಾಶಯಗಳು ಭರ್ತಿಯಾಗಬಹುದು ಎಂಬ ವಿಶ್ವಾಸವಿದೆ.