ಬೆಂಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2020-21ನೇ ಸಾಲಿನ ಎರಡನೇ ಕಂತಿನಲ್ಲಿ 155.30 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ - ಹಣ ಬಿಡುಗಡೆ ಮಾಡಿದ ಸರ್ಕಾರ
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2020-21ನೇ ಸಾಲಿನ ಎರಡನೇ ಕಂತಿನಲ್ಲಿ 155.30 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಆಸ್ಟ್ರೇಲಿಯಾಕ್ಕೆ ಪ್ರವಾಸ ಹೋಗಿರುವ ಭಾರತ ಅಲ್ಲಿ 3 ಏಕದಿನ ಪಂದ್ಯಗಳು, 3 ಟಿ20ಐ ಪಂದ್ಯಗಳು ಮತ್ತು 4 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪ್ರಮುಖಾಕರ್ಷಣೆಯಾಗಿರಲಿದೆ. ಕಳೆದ ವರ್ಷ ಕೊಹ್ಲಿ ಈ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು.
ಮೊದಲನೇ ಕಂತಿನಲ್ಲಿ ಈಗಾಗಲೇ 225 ವಿಧಾನಸಭಾ ಕ್ಷೇತ್ರಗಳು ಮತ್ತು 59 ವಿಧಾನ ಪರಿಷತ್ ಸದಸ್ಯರುಗಳ ಕ್ಷೇತ್ರಗಳಿಗೆ ತಲಾ 50 ಲಕ್ಷ ರೂ. ನಂತೆ ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡನೇ ಕಂತಿನಲ್ಲಿ 225 ವಿಧಾನಸಭಾ ಕ್ಷೇತ್ರಗಳು ಮತ್ತು 71 ವಿಧಾನ ಪರಿಷತ್ ಸದಸ್ಯರುಗಳ ಕ್ಷೇತ್ರಗಳಿಗೆ 50 ಲಕ್ಷ ರೂ. ನಂತೆ ಬಿಡುಗಡೆ ಮಾಡಿ ಆದೇಶಿಸಲಾಗಿದೆ.