ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧ್ಯಕ್ಷರಾಗಿ ಜಿ.ಆರ್.ಚಿಂತಲ ಅವರು ಬೆಂಗಳೂರಿನಲ್ಲಿರುವ ನಬಾರ್ಡ್‍ನ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಇದುವರೆಗೂ ಚಿಂತಲ ಅವರು ನಬಾರ್ಡ್‍ನ ಅಂಗ ಸಂಸ್ಥೆಯಾಗಿರುವ ಎನ್‍ಎಬಿಎಫ್‍ಐಎನ್‍ಎಸ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಚಿಂತಲ ಅವರು ನವದೆಹಲಿಯಲ್ಲಿರುವ ದೇಶದ ಪ್ರತಿಷ್ಠಿತ ಇಂಡಿಯನ್ ಅಗ್ರಿಕಲ್ಚರ್ ರೀಸರ್ಚ್ ಇನ್‍ಸ್ಟಿಟ್ಯೂಟ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ನಬಾರ್ಡ್ ಕೇಂದ್ರ ಕಚೇರಿಯಲ್ಲಿ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ.