ಬೆಂಗಳೂರು:ಎಲೆಕ್ಟ್ರಾನಿಕ್ ಸಿಟಿ ನಿಲಾದ್ರಿ ನಗರದಲ್ಲಿ ಗುರುವಾರ ರಾತ್ರಿ ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅತ್ಯಾಚಾರಕ್ಕೆ ಸಹಕರಿಸಿದ ಆತನ ಸ್ನೇಹಿತೆಯನ್ನೂ ಸೇರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಟಿಎಂ ಲೇಔಟ್ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಗುರುವಾರ ರಾತ್ರಿ ಬಿಟಿಎಂ ಲೇಔಟ್ನಿಂದ ನಿಲಾದ್ರಿ ನಗರಕ್ಕೆ ಖಾಸಗಿ ಕಂಪನಿಯೊಂದರ ಬೈಕ್ ಬುಕ್ ಮಾಡಿದ್ದಳು. ಬೈಕ್ ಹುಡುಗ ಪಿಕ್ ಮಾಡಲು ಬಂದಾಗ ಯುವತಿ ಮದ್ಯಪಾನ ಮಾಡಿದ್ದಳು. ನಿಲಾದ್ರಿ ನಗರಕ್ಕೆ ತಲುಪುವ ಹೊತ್ತಿಗೆ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದಳು ಎಂದು ತಿಳಿದುಬಂದಿದೆ.