ಬೆಂಗಳೂರು:ನಗರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಬ್ಯಾಟರಾಯನಪುರ ಠಾಣೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೋಷಕರು ದೂರು ನೀಡಿರುವುದು ಬೆಳಕಿಗೆ ಬಂದಿದೆ. ಪರಿಚಯ ಇರುವ ಹುಡುಗರೇ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಲಾಗಿದೆ.
ಆದರೆ, ಬೇರೆ ಬೇರೆ ಸಮಯದಲ್ಲಿ ಯುವತಿಯನ್ನು ಯುವಕರು ಬಳಸಿಕೊಂಡಿದ್ದು, ಯುವತಿಯ ಕೆಲ ಖಾಸಗಿ ಫೋಟೋಗಳನ್ನು ಸಹ ಇಟ್ಟುಕೊಂಡಿರುವ ಬಗ್ಗೆ ಕೂಡ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.