ಬೆಂಗಳೂರು:ಬಾಲಕಿ ಮೇಲೆ ಯುವಕರ ಗುಂಪೊಂದು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.
ಬೆಂಗಳೂರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳು ಅಂದರ್ - undefined
ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
![ಬೆಂಗಳೂರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳು ಅಂದರ್](https://etvbharatimages.akamaized.net/etvbharat/images/768-512-2869717-406-83478272-c68b-46cc-8ddc-7470ad140f42.jpg)
ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಬಾಲಕಿ ಕಿರುಚಿದ್ದನ್ನು ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಕಾಡುಗೊಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಸಂಬಂಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹುಡುಗಿ ಅಪ್ರಾಪ್ತೆಯಾದ ಕಾರಣ ಆಕೆಯ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಹಾಗೆ ಆರೋಪಿಗಳ ಕ್ರಿಮಿನಲ್ ಚಟುವಟಿಕೆ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಎಂದು ಮಾಹಿತಿ ನೀಡಿದರು.