ಆನೇಕಲ್: ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದೀಪಾವಳಿ ಹಬ್ಬದ ದಿನ ಹೊಂಚು ಹಾಕಿ ಪಟಾಕಿ ಅಂಗಡಿ ಮಾಲೀಕನನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದರು. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜಯ್, ಯಮನೂರು ನಾಯ್ಕ, ನವೀನ್, ಜೊಬಿನ್, ಗೌತನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 7 ಲಕ್ಷದ 16 ಸಾವಿರ ನಗದು, ಒಂದು ಲಾಂಗ್, ಎರಡು ದ್ವಿಚಕ್ರ ವಾಹನ, ಐದು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ. ಅಂದಹಾಗೆ ದೀಪಾವಳಿ ಹಬ್ಬದ ದಿನ ಅಂಗಡಿ ಮಾಲೀಕ ಚಂದ್ರಶೇಖರ್ ಚಲನವಲನ ಗಮನಿಸಿ ಈ ಗ್ಯಾಂಗ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದರು.