ಕರ್ನಾಟಕ

karnataka

ETV Bharat / state

ಸಾರ್ವಜನಿಕರಿಗೆ ತಿಳಿ ಹೇಳುವ ಮುನ್ನ ಮಾದರಿಯಾಗೋಣ...  ಅಧಿಕಾರಿಗಳಿಗೆ ಬಿಬಿಎಂಪಿಯಿಂದ ಸುತ್ತೋಲೆ - undefined

ಕಚೇರಿಗಳ ಆವರಣದಲ್ಲಿಯೇ ಕಚೇರಿಯ ಹಸಿ ಕಸವನ್ನು ಕಾಂಪೋಸ್ಟ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಸರ್ಕಾರಿ ಅಧಿಕಾರಿಗಳಿಗೆ ಬಿಬಿಎಂಪಿ ಮಹತ್ವದ ಸುತ್ತೋಲೆ ಹೊರಡಿಸಿದೆ

ಬಿಬಿಎಂಪಿ ಮಹತ್ವದ ಸುತ್ತೋಲೆ

By

Published : Jun 27, 2019, 2:11 AM IST

ಬೆಂಗಳೂರು:ಸಾರ್ವಜನಿಕರಿಗೆ ತಿಳಿ ಹೇಳುವ ಮುನ್ನ ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರು ಕಸವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ, ಮಾದರಿಯಾಗುವಂತೆ ಬಿಬಿಎಂಪಿ ಮಹತ್ವದ ಸುತ್ತೋಲೆ ಹೊರಡಿಸಿದೆ.

ಕಸ ಕಾಂಪೋಸ್ಟ್ ಕಾರ್ಯ ಸರ್ಕಾರಿ ಅಧಿಕಾರಿ-ನೌಕರರಿಂದಲೇ ಪ್ರಾರಂಭ

ಇನ್ನು ಈ ಸುತ್ತೋಲೆಯ ಪ್ರತಿ ಈಟಿವಿ ಭಾರತಕ್ಕೆ ಲಭ್ಯವಾಗಿದ್ದು, ಎಲ್ಲಾ ಅಧಿಕಾರಿ, ನೌಕರರು ತಮ್ಮ ತಮ್ಮ ಮನೆಯ ಕಸವನ್ನು ಕಡ್ಡಾಯವಾಗಿ ಕಾಂಪೋಸ್ಟ್ ಮಾಡುವುದರ ಜೊತೆಗೆ ಸರ್ಕಾರಿ ಕಚೇರಿಗಳ ಆವರಣದಲ್ಲಿಯೇ ಕಚೇರಿಯ ಹಸಿ ಕಸವನ್ನು ಕಾಂಪೋಸ್ಟ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೆ, ನಿತ್ಯದ ಬಳಕೆಯಲ್ಲಿಯೂ ಪ್ಲಾಸ್ಟಿಕ್ ಉಪಯೋಗಿಸದೇ ಬಟ್ಟೆ ಬ್ಯಾಗ್ ಬಳಸಲು ನಿರ್ದೇಶಿಸಿದೆ. ಈ ಎಲ್ಲಾ ವಿಷಯಗಳನ್ನು ಸರ್ಕಾರಿ ಅಧಿಕಾರಿಗಳು ಪಾಲಿಸಿರುವ ಬಗ್ಗೆ 31-07-2019 ರ ಒಳಗಾಗಿ ಸರ್ಕಾರಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕೆಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ರಾಷ್ಟೀಯ ಹಸಿರು ನ್ಯಾಯಾಧಿಕರಣವು ರಚಿಸಿರುವ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ಸುಭಾಷ್ ಬಿ. ಆದಿಯವರ ನೇತೃತ್ವದಲ್ಲಿ 14-05-19 ರಂದುನಡೆದ ಸಭೆಯಲ್ಲಿ ಮೇಲ್ಕಂಡಂತೆ ಆದೇಶಿಸಿದ್ದರು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಆಯುಕ್ತರು ಈ ಸುತ್ತೋಲೆ ಹೊರಡಿಸಿದ್ದಾರೆ.

ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನಾಗಿ ಮೂರು ವಿಭಾಗಗಳಲ್ಲಿ ವಿಂಗಡಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಚೇರಿಗಳು, ಕೋರ್ಟ್​ಗಳು, ನಿಗಮ ಮಂಡಳಿಗಳು, ಪ್ರಾಧಿಕಾರಗಳು, ಆಯೋಗಗಳು, ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳಲ್ಲಿನ ಕಸವನ್ನು ಅದೇ ಕಚೇರಿ ಆವರಣದಲ್ಲಿ ಕಾಂಪೋಸ್ಟ್ ಮಾಡುವ ವ್ಯವಸ್ಥೆ ಅಳವಡಿಸಿಕೊಳ್ಳಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಒಟ್ಟಿನಲ್ಲಿ ಘನ ತ್ಯಾಜ್ಯ ನಿರ್ವಹಣಾ ನಿಯಮ-2016 ರನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಹಾಗೂ ಮೊದಲು ಸರ್ಕಾರಿ ನೌಕರರು, ಅಧಿಕಾರಿಗಳೇ ಸಾರ್ವಜನಿಕರಿಗೆ ಮಾದರಿಯಾಗಿರಬೇಕೆಂಬ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ತರಲಾಗುತ್ತಿದೆ. ಅಧಿಕಾರಿಗಳು ನಿಜವಾಗಿಯೂ ನಿಯಮಪಾಲನೆ ಮಾಡ್ತಾರೋ ಅಥವಾ ನಿಯಮಗಳನ್ನು ಗಾಳಿಗೆ ತೂರುತ್ತಾರೋ ಎಂದು ಕಾದುನೋಡಬೇಕಿದೆ.

For All Latest Updates

TAGGED:

ABOUT THE AUTHOR

...view details