ಕರ್ನಾಟಕ

karnataka

ETV Bharat / state

ಬೆಂಗಳೂರು: ಗ್ಯಾಸ್​ ಸಿಲಿಂಡರ್ ಸ್ಫೋಟ, 6 ಜನರಿಗೆ ಗಾಯ

ಬೆಂಗಳೂರಿನಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು ಹಲವರಿಗೆ ಗಾಯಗಳಾಗಿವೆ.

By ETV Bharat Karnataka Team

Published : Jan 16, 2024, 10:04 AM IST

Updated : Jan 16, 2024, 7:35 PM IST

ಗ್ಯಾಸ್​ ಸಿಲಿಂಡರ್ ಸ್ಫೋಟ
ಗ್ಯಾಸ್​ ಸಿಲಿಂಡರ್ ಸ್ಫೋಟ

ಬೆಂಗಳೂರಿನಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ

ಬೆಂಗಳೂರು:ಮನೆಯಲ್ಲಿಗ್ಯಾಸ್ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಯಲಹಂಕದ ಲಾಲ್ ಬಹದ್ದೂರ್ ಶಾಸ್ತ್ರಿ ಲೇಔಟ್‌ನಲ್ಲಿ ನಡೆದಿದೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಬೆಳಿಗ್ಗೆ 7.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್

ಡಿಸಿಪಿ ಪ್ರತಿಕ್ರಿಯೆ: ''ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು,‌ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಲಾಗಿದೆ. ಮನೆಯಲ್ಲಿ ನಿನ್ನೆ ಹೊಸದೊಂದು ಸಿಲಿಂಡರ್ ಬದಲಿಸಿದ್ದಾರೆ. ರಾತ್ರಿ ಗ್ಯಾಸ್ ಸೋರಿಕೆಯಾಗಿದೆ. ಸುಮಾರು 14 ಕೆಜಿಯಷ್ಟು ಗ್ಯಾಸ್ ಲೀಕ್ ಆಗಿದೆ ಎಂಬ ಮಾಹಿತಿ ಇದೆ. ಬೆಳಗ್ಗೆ ಮನೆಯವರು ಗ್ಯಾಸ್ ಸ್ಟೌ ಹಚ್ಚಿದಾಗ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಗೋಡೆಗಳೆಲ್ಲ ಒಡೆದು ಹೋಗಿವೆ. ಎಫ್ಎಸ್ಎಲ್, ಅಗ್ನಿಶಾಮಕದಳ, ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಘಟನೆಯಲ್ಲಿ ಆರು ಜನರಿಗೆ ಗಾಯಗಳಾಗಿವೆ. ಇಬ್ಬರಿಗೆ ಹೆಚ್ಚಿನ ಗಾಯಗಳಾಗಿವೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಯಲಹಂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಘಟನೆಗೆ ನಿಖರ ಕಾರಣ ಗೊತ್ತಾಗಬೇಕಿದೆ'' ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ.. ಇಬ್ಬರು ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

Last Updated : Jan 16, 2024, 7:35 PM IST

ABOUT THE AUTHOR

...view details