ಬೆಂಗಳೂರು :ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 18ನೇ ಆರೋಪಿಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದೆ.
ಆರೋಪಿ ರಿಷಿಕೇಶ್ ದೇವಾಡಿಕರ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದು, ಈತನನ್ನು ಜಾರ್ಖಂಡ್ನಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿ ತೆಗೆದುಕೊಳ್ಳಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿಕೊಂಡಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣ: 18ನೇ ಆರೋಪಿಯನ್ನು ಬಂಧಿಸಿದ ಎಸ್ಐಟಿ ಗೌರಿ ಲಂಕೇಶ್ ಹತ್ಯೆಯಾಗಿ ಎರಡೂವರೆ ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ ನಾಶ ಪಡಿಸಿರುವ ಆರೋಪವಿದೆ. ಗೌರಿ ಹತ್ಯೆಯಲ್ಲಿ ಮುರಳಿ ಭಾಗಿಯಾಗಿದ್ದ ಬಗ್ಗೆ ಅಮೋಲ್ ಕಾಳೆಯ ಡೈರಿಯಲ್ಲಿ ಸುಳಿವು ಸಿಕ್ಕಿತು. ಎರಡೂವರೆ ವರ್ಷಗಳಿಂದ ಆರೋಪಿ ಬೆನ್ನುಬಿದ್ದಿದ್ದ ಎಸ್‌ಐಟಿ ಅಧಿಕಾರಿಗಳು, ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಈ ಕೃತ್ಯ ಬಯಲಿಗೆ ಬಂದ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿದ್ದಾರೆ.
ಇನ್ನು ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಮೇಶ್ ವಾಗ್ಮೋರೆ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.