ಕರ್ನಾಟಕ

karnataka

ETV Bharat / state

ಗೌರಿ, ಕಲಬುರ್ಗಿ ಹತ್ಯೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್.ಚಂದ್ರಮೌಳಿ ನೇಮಕ - ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್. ಎಸ್. ಚಂದ್ರಮೌಳಿ ನೇಮಕ

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್. ಎಸ್. ಚಂದ್ರಮೌಳಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗೌರಿಲಂಕೇಶ್ ಹಾಗೂ ಎಂ.ಎಂ. ಕಲಬುರ್ಗಿ

By

Published : Oct 11, 2019, 8:40 PM IST

Updated : Oct 11, 2019, 9:44 PM IST

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.

ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆಪ್ರಕರಣಗಳಲ್ಲಿ ಕೋರ್ಟ್‌ನಲ್ಲಿ ವಾದ ನಡೆಸಲು ಹಿರಿಯ ವಕೀಲ ಚಂದ್ರಮೌಳಿ ಅವರನ್ನು ಸರ್ಕಾರ ನೇಮಕ ಮಾಡಿದೆ.

ರಾಜ್ಯ ಸರ್ಕಾರದ ಆದೇಶ ಪತ್ರ

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೌರಿ ಹತ್ಯೆ ಹಾಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಲಬುರ್ಗಿ ಹತ್ಯೆ ನಡೆದಿತ್ತು.

ಹತ್ಯೆಯಾದ ಇಬ್ಬರು ಕೂಡ ಹಿಂದುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗಳು ಆಕ್ರೋಶಗೊಂಡು ಹತ್ಯೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿತ್ತು.

Last Updated : Oct 11, 2019, 9:44 PM IST

ABOUT THE AUTHOR

...view details