ಕರ್ನಾಟಕ

karnataka

ETV Bharat / state

ಬಳ್ಳಾರಿ ಮಹಾನಗರ ಪಾಲಿಕೆ ಸೇರಿ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ - 10 urban local bodies including

ಏ.19 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 27ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಅಗತ್ಯಬಿದ್ದರೆ ಏಪ್ರಿಲ್ 29 ರಂದು ಮರು ಮತದಾನ ನಡೆಸಲಾಗುತ್ತದೆ. ಏಪ್ರಿಲ್ 30ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ..

ಚುನಾವಣಾ ಆಯೋಗ
ಚುನಾವಣಾ ಆಯೋಗ

By

Published : Mar 29, 2021, 10:58 PM IST

ಬೆಂಗಳೂರು : ಬಳ್ಳಾರಿ ಮಹಾನಗರ ಪಾಲಿಕೆ ಸೇರಿ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು 2 ಪಟ್ಟಣ ಪಂಚಾಯತ್‌ಗೆ ಉಪಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗವು ಘೋಷಣೆ ಮಾಡಿದ್ದು, ಚುನಾವಣೆ ಏಪ್ರಿಲ್ 27ರಂದು ನಡೆಯಲಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಮತ್ತು ಹಾಸನ ಜಿಲ್ಲೆಯ ಬೇಲೂರು ಪುರಸಭೆ, ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಕೊಡಗು ಜಿಲ್ಲೆಯ ಮಡಿಕೇರಿ, ಬೀದರ್ ನಗರಸಭೆ ಹಾಗೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತ್‌ಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರ, ಬೀದರ್ ಜಿಲ್ಲೆಯ ಹಳ್ಳಿಖೇಡ ಪಟ್ಟಣ ಪಂಚಾಯತ್‌ಗೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಏಪ್ರಿಲ್ 8ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.16ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ.

ಏ.19 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 27ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಅಗತ್ಯಬಿದ್ದರೆ ಏಪ್ರಿಲ್ 29 ರಂದು ಮರು ಮತದಾನ ನಡೆಸಲಾಗುತ್ತದೆ. ಏಪ್ರಿಲ್ 30ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿಯನ್ನು ಆಯೋಗವು ನಿಗದಿಗೊಳಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರು ಲಕ್ಷ ರೂ. ನಗರ ಸಭೆ ವ್ಯಾಪ್ತಿಯಲ್ಲಿ ಎರಡು ಲಕ್ಷ ರೂ., ಪುರಸಭೆ ವ್ಯಾಪ್ತಿಯಲ್ಲಿ 1.50 ಲಕ್ಷ ರೂ. ಹಾಗೂ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಒಂದು ಲಕ್ಷ ರೂ. ಅಭ್ಯರ್ಥಿಯ ಚುನಾವಣಾ ವೆಚ್ಚ ಮಿತಿಗೊಳಿಸಲಾಗಿದೆ.

ABOUT THE AUTHOR

...view details