ಕರ್ನಾಟಕ

karnataka

ETV Bharat / state

ಮೊಬೈಲ್​ ನೆಟ್​ವರ್ಕ್​ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಿ.. ಸಿಎಂಗೆ ಪತ್ರ ಬರೆದ ಸುರೇಶ್​ಕುಮಾರ್ - Suresh Kumar, who wrote to CM

ಮಳೆಗಾಲ ಆದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ನೆಟ್​​​ವರ್ಕ್ ಸಮಸ್ಯೆಗೆ ಕೊನೆ ಹಾಡಲು ಆಪರೇಟರ್​​ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಅವರು ಸಿಎಂ ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Suresh kumar
ಸುರೇಶ್​ಕುಮಾರ್

By

Published : Jun 21, 2021, 6:58 PM IST

ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿ ಶಾಲಾ - ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆ ರಾಜ್ಯದ ವಿವಿಧ ಭಾಗಗಳಲ್ಲಿ ನೆಟ್​ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದೆ. ನೆಟ್​ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ನೆಟ್-ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್-ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ನೆಟ್ ವರ್ಕ್ ಸಮಸ್ಯೆಗೆ ಕೊನೆ ಹಾಡಲು ಆಪರೇಟರ್​​ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಅವರು ಸಿಎಂ ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇಂದಿನ ಸಂದರ್ಭವನ್ನು ಗಮನಿಸಿದರೆ ಈ ಕೋವಿಡ್ ಕಾಲಘಟ್ಟದಲ್ಲಿ ಆನ್‍ಲೈನ್ ತರಗತಿಗಳೇ ಸಾಮಾನ್ಯವಾಗಬಹುದಾಗಿದೆ.

ಕೋವಿಡ್ ಪೂರ್ವದ ಸಹಜ ಸಾಮಾಜಿಕ ಸ್ಥಿತಿಗತಿಗಳು ಸದ್ಯಕ್ಕೆ ಹಿಂದಿರುಗಲು ಸಾಧ್ಯ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಈ ಹೊಸ ಸ್ಥಿತಿಗೆ ಹೊಂದಿಕೊಳ್ಳದೇ ಅನ್ಯದಾರಿ ಇಲ್ಲವಾದ್ದರಿಂದ ನಾವು ನೆಟ್ ವರ್ಕ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಲೇಬೇಕಿದೆ ಎಂದಿದ್ದಾರೆ.

ಮೊಬೈಲ್ ಕಲಿಕಾ ಪ್ರಯತ್ನದಲ್ಲಿ ನೆಟ್ ವರ್ಕ್ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಗುಡ್ಡದ ಮೇಲೆ ಮಳೆ ಹನಿಯಲ್ಲಿ ಪುಸ್ತಕ ಮತ್ತು ಮೊಬೈಲ್ ಹಿಡಿದು ಹತಾಶಳಾಗಿ ಕುಳಿತ ದೃಶ್ಯವೊಂದನ್ನು ಉಲ್ಲೇಖಿಸಿರುವ ಸಚಿವರು, ಆನ್​ಲೈನ್ ಶಿಕ್ಷಣ ಅನಿವಾರ್ಯವಾಗುತ್ತಿರುವ ಈ ದಿನಮಾನಗಳಲ್ಲಿ ವಿಶೇಷ ನೀತಿ ನಿರೂಪಣೆ ಮಾಡಬೇಕಾದ ಅಗತ್ಯವಿದೆ.

ಈ ಹಿನ್ನೆಲೆ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೆಟ್ ವರ್ಕ್ ಆಪರೇಟರ್​​ಗಳ ಸಭೆಯನ್ನು ಶೀಘ್ರವೇ ಆಯೋಜಿಸಿ ಸಮರೋಪಾದಿಯಲ್ಲಿ ನೆಟ್​ವರ್ಕ್ ಸಮಸ್ಯೆಯನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ನಮ್ಮಲ್ಲಿ ಸಿದ್ದರಾಮಯ್ಯ, ಡಿಕೆಶಿ ಬಣಗಳಿಲ್ಲ.. ಇರೋದೊಂದೇ ಅದು ಕಾಂಗ್ರೆಸ್ : ಸಿದ್ದರಾಮಯ್ಯ

ಈ ಸಮಸ್ಯೆ ಪರಿಹಾರವಾದರೆ ನಮ್ಮ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಸರ್ಕಾರದ ಜವಾಬ್ದಾರಿಯ ನಿರ್ವಹಣೆ ಪರಿಣಾಮಕಾರಿಯಾಗಲಿದೆ ಎಂದೂ ಉಲ್ಲೇಖಿಸಿದ್ದಾರೆ.

ABOUT THE AUTHOR

...view details