ಕರ್ನಾಟಕ

karnataka

ETV Bharat / state

ಬೆಂಗಳೂರು: ಶಾಲೆಯಲ್ಲಿ ಆಟವಾಡುವಾಗ ಕುಸಿದು ಬಿದ್ದ ಬಾಲಕಿ ಅನುಮಾನಾಸ್ಪದ ಸಾವು

ಬೆಂಗಳೂರಿನ ಆರ್.ಡಿ.ಇಂಟರ್‌ ನ್ಯಾಷನಲ್ ಶಾಲೆಯಲ್ಲಿ ಕುಸಿದು ಬಿದ್ದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bangalore
ಕುಸಿದು ಬಿದ್ದ ಬಾಲಕಿ ಅನುಮಾನಾಸ್ಪದ ಸಾವು

By

Published : Nov 5, 2022, 2:19 PM IST

Updated : Nov 5, 2022, 3:45 PM IST

ಬೆಂಗಳೂರು: ನಗರದ ಶಾಲೆಯಲ್ಲಿ ಕುಸಿದು ಬಿದ್ದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಮಚಂದ್ರಪುರದ ನಿವಾಸಿ ನಿಶ್ಚಿತಾ (9) ಆರ್.ಡಿ.ಇಂಟರ್‌ ನ್ಯಾಷನಲ್ ಸ್ಕೂಲ್‌ ವಿದ್ಯಾರ್ಥಿನಿ. ಶುಕ್ರವಾರ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಶಿಕ್ಷಕರು ಕೂಡಲೇ ಬಾಲಕಿಯನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಶಿತಾ ಮೃತಪಟ್ಟಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಕಿ ಅನುಮಾನಾಸ್ಪದ ಸಾವು

ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಸಿಬ್ಬಂದಿ, ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ಮರಣೋತ್ತರ ಪರೀಕ್ಷೆ ಸಹ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಂದ್ರು ಅಂತಿಮ ಯಾತ್ರೆ.. ಕಣ್ಣೀರು ಹಾಕಿದ ಶಾಲೆಯ ಮಕ್ಕಳು

Last Updated : Nov 5, 2022, 3:45 PM IST

ABOUT THE AUTHOR

...view details