ಬೆಂಗಳೂರು:ನವೆಂಬರ್ನಲ್ಲಿ ಭಾರತ ಸರ್ಕಾರವು, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಮತ್ತು ಸೇವಾ ರಫ್ತು ಉತ್ತೇಜನಾ ಮಂಡಳಿ (ಸರ್ವಿಸಸ್ ಎಕ್ಸ್ ಪೋರ್ಟ್ ಪ್ರಮೋಷನ್ ಕೌನ್ಸಿಲ್) ಸಹಯೋಗದೊಂದಿಗೆ ಹಮ್ಮಿಕೊಂಡಿರುವ 5 ನೇ ಗ್ಲೋಬಲ್ ಎಕ್ಸಿಬಿಷನ್ ಇನ್ ಸರ್ವಿಸಸ್ (ಜಿಇಎಸ್) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯ ಕುರಿತು ಸಿಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧರಿ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದೆ.
ಗ್ಲೋಬಲ್ ಎಕ್ಸಿಬಿಷನ್ ಇನ್ ಸರ್ವಿಸಸ್ ಕುರಿತು ಸಿಎಂ ಜೊತೆ ಅಮನ್ ಚೌಧರಿ ಚರ್ಚೆ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಭಾರತ ಸರ್ಕಾರವು, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಮತ್ತು ಸೇವಾ ರಫ್ತು ಉತ್ತೇಜನಾ ಮಂಡಳಿ (ಸರ್ವಿಸಸ್ ಎಕ್ಸ್ ಪೋರ್ಟ್ ಪ್ರಮೋಷನ್ ಕೌನ್ಸಿಲ್) ಸಹಯೋಗದೊಂದಿಗೆ ಹಮ್ಮಿಕೊಂಡಿರುವ 5 ನೇ ಗ್ಲೋಬಲ್ ಎಕ್ಸಿಬಿಷನ್ ಇನ್ ಸರ್ವಿಸಸ್ (ಜಿಇಎಸ್) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯ ಕುರಿತು ಸಿಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧುರಿ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದೆ.
ಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧುರಿ ನೇತೃತ್ವದ ನಿಯೋಗದಿಂದ ಸಿ ಎಂ ಭೇಟಿ
ಈ ಸಂದರ್ಭದಲ್ಲಿ ಸೇವಾ ವಲಯಕ್ಕೆ ಸಂಬಂಧಿಸಿದ ಈ ಕಾರ್ಯಕ್ರಮದಿಂದ ಆತಿಥೇಯ ರಾಜ್ಯ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿಐಐ ಉಪಾಧ್ಯಕ್ಷ ಸಂದೀಪ್ ಸಿಂಗ್, ಮಾಜಿ ಅಧ್ಯಕ್ಷರಾದ ಎಲ್. ಕೃಷ್ಣನ್, ಲಕ್ಷ್ಮೀನಾರಾಯಣ್, ಸಿಐಐ ಪ್ರಾದೇಶಿಕ ನಿರ್ದೇಶಕ ಆರ್.ಸತೀಶ್, ಸಿಐಐ ಕರ್ನಾಟಕದ ನಿರ್ದೇಶಕ ಮೇಜರ್ ನೀಲ್ ಕ್ಯಾಸ್ಟಲಿನೋ ಉಪಸ್ಥಿತರಿದ್ದರು.