ಬೆಂಗಳೂರು :ಮೂರನೇ ದಿನವಾದ ಇಂದು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಉದ್ಯಮಿಗಳು ರಾಜ್ಯದಲ್ಲಿ 10 ಲಕ್ಷ ಕೋಟಿ ರೂ. ಗೂ ಅಧಿಕ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿರುವುದು ನಮ್ಮ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಾರಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಐದು ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ನಮ್ಮ ಸರ್ಕಾರದ್ದಾಗಿತ್ತು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು ಹೂಡಿಕೆ ಮೊತ್ತ ಹಾಗೂ ಪೂರ್ಣ ವಿವರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಳ್ಳಲ್ಲಿದ್ದಾರೆ.
ರಾಜ್ಯದಲ್ಲಿ ಅಂದಾಜು 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತದೆ ಎಂದು ಅಂದಾಜಿಸಲಾಗಿದೆ. ನಮ್ಮ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸಿಗಲಿವೆ ಎಂಬುದೇ ಅತ್ಯಂತ ಸಂತಸದ ವಿಷಯ ಎಂದಿದ್ದಾರೆ.