ಕರ್ನಾಟಕ

karnataka

ETV Bharat / state

ಪರಿಷತ್​​ನಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಪಾಸ್: ಗೋ ಪೂಜೆ ನೆರವೇರಿಸಿದ ಸಿಎಂ! - CM BS Yeddyurappa news

ಗೋ‌ ಹತ್ಯೆ ‌ನಿಷೇಧ ಮಸೂದೆ ಅಂಗೀಕಾರವಾದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು.

Go worship
ಗೋ ಪೂಜೆ ನೆರವೇರಿಸಿದ ಸಿಎಂ

By

Published : Feb 9, 2021, 11:02 AM IST

ಬೆಂಗಳೂರು: ವಿಧಾನ ಪರಿಷತ್​​ನಲ್ಲಿ ಗೋ ಹತ್ಯೆ ‌ನಿಷೇಧ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು.

ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದಾಗಲೂ ಗೋಪೂಜೆ ನೆರವೇರಿಸಿದ್ದ ಸಿಎಂ ಯಡಿಯೂರಪ್ಪ, ವಿಧಾನ ಪರಿಷತ್​​ನಲ್ಲಿ ಅಂಗೀಕಾರವಾಗುತ್ತಿದ್ದಂತೆ ಮತ್ತೊಮ್ಮೆ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಉಪಸ್ಥಿತರಿದ್ದರು.

ವಿಧಾನ ಪರಿಷತ್​​ನಲ್ಲಿ ಅಂಗೀಕಾರಕ್ಕೆ ಬಾಕಿ ಇದ್ದ ಗೋ ಹತ್ಯೆ ನಿಷೇಧ ಕಾಯ್ದೆ ಸೋಮವಾರ ಮಂಡನೆಯಾಗಿ ಅಂಗೀಕಾರವಾಗುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯರನ್ನು ನಿವಾಸಕ್ಕೆ ಕರೆಸಿಕೊಂಡ ಸಿಎಂ ಎಂಎಲ್ಸಿಗಳಿಗೆ ಅಭಿನಂದನೆ ಸಲ್ಲಿಸಿದ್ದರು.

ABOUT THE AUTHOR

...view details