ಬೆಂಗಳೂರು:ಮೊದಲ ಸಲ ವರ್ಚುವಲ್ ಆಗಿ ನಡೆದ ‘ಬೆಂಗಳೂರು ಟೆಕ್ ಶೃಂಗಸಭೆ'ಗೆ ಮೊದಲ ದಿನವಾದ ಗುರುವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ.
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ನಿರೀಕ್ಷೆ ಮೀರಿ ಸ್ಪಂದನೆ
‘ಬೆಂಗಳೂರು ಟೆಕ್ ಶೃಂಗಸಭೆಗೆ ಮೊದಲ ದಿನ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.
ಬಿಟಿಎಸ್-2020 ಆನ್ಲೈನ್ ವೇದಿಕೆಯೊಂದರಲ್ಲೇ 7,000 ವ್ಯಾಪಾರೋದ್ಯಮಿಗಳು ನೋಂದಣಿ ಮಾಡಿ ಪಾಲ್ಗೊಂಡರು. ಇತರ 10,000 ಜನರು ಇದೇ ವೇದಿಕೆ ಮೂಲಕ ಆಸಕ್ತಿಯಿಂದ ಭಾಗವಹಿಸಿದ್ದರು. ಒಟ್ಟೂ ಈ ವೇದಿಕೆ ಮೂಲಕ ಪಾಲ್ಗೊಂಡವರ ಸಂಖ್ಯೆ 17,000 ದಾಟಿದೆ. ಕಳೆದ ವರ್ಷ ಮೂರು ದಿನಗಳೂ ಸೇರಿ ಪಾಲ್ಗೊಂಡ ವ್ಯಾಪಾರೋದ್ಯಮಿಗಳ ಸಂಖ್ಯೆ 3,000 ಆಗಿತ್ತು.
ಇದಲ್ಲದೇ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕೂಡ 2 ಕೋಟಿಗೂ ಹೆಚ್ಚು ಜನರು ಮೇಳದಲ್ಲಿ ಭಾಗಿಯಾಗಿದ್ದಾರೆ. ಟಿವಿ ವಾಹಿನಿಗಳ ಮೂಲಕ ವೀಕ್ಷಿಸಿದವರ ಸಂಖ್ಯೆಯೂ ಅಧಿಕ ಸಂಖ್ಯೆಯಲ್ಲಿದೆ. ಒಟ್ಟಾರೆ ದೇಶ-ವಿದೇಶಗಳ ಕೋಟ್ಯಂತರ ಜನರು ಅತ್ಯಧಿಕ ಸಂಖ್ಯೆಯಲ್ಲಿ ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.