ಬೆಂಗಳೂರು : ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಗೋಪಾಲಯ್ಯ ಕೆಂಪೇಗೌಡರ ಅಶ್ವಾರೂಢ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 67 ನಾಗಪುರದ ಶಾಸಕರ ಭವನದಲ್ಲಿ ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಮಹಾನಗರ ನಿರ್ಮಾತೃ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.