ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಆಸ್ತಿಗಳು, ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಇದರಿಂದಾಗಿ ಪಾಲಿಕೆ ಬೊಕ್ಕಸಕ್ಕೆ ಪ್ರತಿ ವರ್ಷ ನಷ್ಟವಾಗ್ತಿದೆ. ಬಿಬಿಎಂಪಿ ಹಾಕಿಕೊಳ್ಳುವ ನಿರೀಕ್ಷಿತ ಆದಾಯದ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ಈ ವರ್ಷವೂ ಪಾಲಿಕೆಗೆ ನಿರೀಕ್ಷೆಯಷ್ಟು ಆಸ್ತಿ ತೆರಿಗೆ ಪಾವತಿಯಾಗುತ್ತಿಲ್ಲ.
ಬಿಬಿಎಂಪಿಯ ಪ್ರಮುಖ ಆದಾಯ ಮೂಲವಾಗಿರುವ ಆಸ್ತಿ ತೆರಿಗೆ ವಿಚಾರವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮಾತನಾಡಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪಾಲಿಕೆ ಕಂದಾಯ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಪ್ರಾಪರ್ಟಿ ಸೀಲ್ ಮಾಡುವುದು ಅಥವಾ ಇತರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.