ಕರ್ನಾಟಕ

karnataka

ETV Bharat / state

ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ: 3 ವರ್ಷಗಳೊಳಗೆ ಕಾಮಗಾರಿ ಮುಗಿಸಲು ಸಿಎಂ ಸೂಚನೆ - basavakalyana anubhava mantapa construction

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆ ನಡೆಯಿತು.

government-agreed-to-construct-anubhava-mantapa-in-rs-532-crore
532 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ: 3 ವರ್ಷಗಳೊಳಗೆ ಕಾಮಗಾರಿ ಮುಗಿಸಲು ಸಿಎಂ ಸೂಚನೆ

By

Published : May 5, 2022, 10:59 PM IST

ಬೆಂಗಳೂರು:ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಇಂದು ಒಪ್ಪಿಗೆ ನೀಡಿದ್ದು, ಮೂರು ವರ್ಷಗಳೊಳಗಾಗಿ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಕುರಿತು ಮಹತ್ವದ ಚರ್ಚೆ ನಡೆದಿದ್ದು, 532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಅನುಭವ ಮಂಟಪ ಬಸವಣ್ಣನವರ ಕ್ರಾಂತಿಕಾರಿ ವೇದಿಕೆ. ಈ ಮಂಟಪದ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಬಸವಣ್ಣನವರು ಮಾಡಿದ್ದಾರೆ. ಅವರು ಮಾಡಿರುವ ಸಾಮಾಜಿಕ ಕ್ರಾಂತಿಯನ್ನು ಪ್ರತಿಬಿಂಬಿಸುವ ರೂಪದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಅನುಭವ ಮಂಟಪದಲ್ಲಿ 12ನೇ ಶತಮಾನದಲ್ಲಿ ಇದ್ದಂತಹ ವಚನಕಾರರು ದಾರ್ಶನಿಕ ಪುರುಷರ ಕುರಿತಾದ ಮಾಹಿತಿ ನೀಡುವಂತಹ ಕಿರು ಚಿತ್ರಗಳ ಪ್ರದರ್ಶನ, ಬಸವಣ್ಣನವರ ಜೀವನ ಸಾಧನೆ ಬಿಂಬಿಸುವ ಮಾಹಿತಿಗಳನ್ನು ಅನುಭವ ಮಂಟಪಕ್ಕೆ ಆಗಮಿಸುವ ಎಲ್ಲರಿಗೂ ವಿವರಿಸುವ ವ್ಯವಸ್ಥೆ ಈ ಅನುಭವ ಮಂಟಪದಲ್ಲಿ ಇರಲಿದೆ ಎಂದು ಮಂಡಳಿ ತಿಳಿಸಿದೆ.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ರಘುನಾಥ ರಾವ್ ಮಾಲ್ಕಪುರ್, ಅಮರನಾಥ ಪಾಟೀಲ್, ಶಾಸಕರಾದ ಈಶ್ವರ ಖಂಡ್ರೆ, ಶಶೀಲ್ ನಮೋಶಿ ಮೊದಲಾದವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಹಾಗೂ ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬಸವಕಲ್ಯಾಣ ವೃದ್ಧಿ ಮಂಡಳಿಯ ಆಯುಕ್ತ ಶಿವಕುಮಾರ್ ಶೀಲವಂತ ಉಪಸ್ಥಿತರಿದ್ದರು.

ಇದನ್ನೂ ಓದಿ:ಗ್ರಾಮೀಣ ಜನರಿಗೆ ಗುಡ್​ನ್ಯೂಸ್​: ಯಶಸ್ವಿನಿ ಯೋಜನೆ ಅ.2 ರಂದು ಉದ್ಘಾಟನೆ: ಬೊಮ್ಮಾಯಿ

ABOUT THE AUTHOR

...view details