ಬೆಂಗಳೂರು :ಮಳೆಯ ಆಧಾರದ ಮೇಲೆ 49 ತಾಲೂಕುಗಳನ್ನು ಬರಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಈ ತಾಲೂಕುಗಳಿಗೆ ತಲಾ ಒಂದು ಕೋಟಿ ರೂಪಾಯಿ ಹಾಗೂ ಇನ್ನುಳಿದ 127 ತಾಲೂಕುಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
ಬರಪೀಡಿತ 49 ತಾಲೂಕುಗಳಿಗೆ ತಲಾ 1 ಕೋಟಿ ರೂ. ಬಿಡುಗಡೆ: ಸಚಿವ ಆರ್.ಅಶೋಕ್ - ಸಚಿವ ಆರ್ ಅಶೋಕ್
ಬರಪೀಡಿತ ಪ್ರದೇಶಗಳಿಗೆ ಒಟ್ಟು 112.50 ಕೋಟಿ ರೂ.ಗಳ ಬಿಡುಗಡೆಗೆ ಸಚಿವ ಸಂಪುಟ ಉಪಸಮಿತಿ ಒಪ್ಪಿಗೆ ನೀಡಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
![ಬರಪೀಡಿತ 49 ತಾಲೂಕುಗಳಿಗೆ ತಲಾ 1 ಕೋಟಿ ರೂ. ಬಿಡುಗಡೆ: ಸಚಿವ ಆರ್.ಅಶೋಕ್ R Ashok](https://etvbharatimages.akamaized.net/etvbharat/prod-images/768-512-6726598-thumbnail-3x2-chai.jpg)
ಆರ್. ಅಶೋಕ್
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಚಿವ ಆರ್. ಅಶೋಕ್
ಸದ್ಯ ರಾಜ್ಯದಲ್ಲಿ ಮೇವಿಗೆ ಕೊರತೆ ಇಲ್ಲ. 27 ವಾರಗಳಿಗೆ ಅಗುವಷ್ಟು ಮೇವು ದಾಸ್ತಾನು ಇದೆ. ಮೇವಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ನು ಆರು ಜಿಲ್ಲೆಗಳ 81 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅದೇ ರೀತಿ 271 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಮೂಲಕ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರು ಪೂರೈಸುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಕೊಟ್ಟಿದ್ದು, ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುತ್ತದೆ ಎಂದರು.