ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲ ಕಾಲಾವಾಕಾಶ ನೀಡುವಂತೆ ಸರ್ಕಾರವು ಹೈಕೋರ್ಟ್ಗೆ ಮನವಿ ಮಾಡಿದೆ. ಬಿಬಿಎಂಪಿ ಚುನಾವಣೆಗೆ ಸರ್ಕಾರ ಹೊರಡಿಸಿದ್ದ ಮೀಸಲು ಅಧಿಸೂಚನೆ ಪ್ರಶ್ನಿಸಿ ವಿ.ಶ್ರೀನಿವಾಸ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು.
ಧಾರವಾಡ ಪೀಠದಿಂದ ವರ್ಚುವಲ್ ಆಗಿ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿದೆ. ಈ ವೇಳೆ ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಹಾಜರಾಗಿ, ನಿವೃತ್ತ ನ್ಯಾ. ಭಕ್ತವವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದು ಮತ್ತು ರಾಜಕೀಯ ಹಿಂದುಳಿದಿರುವಿಕೆ ಕುರಿತಂತೆ ಮಾಹಿತಿ ಕೇಳಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಸಮಿತಿಯು ಸಮಯ ಕೇಳಿದೆ. ಈ ನಿಟ್ಟಿನಲ್ಲಿ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.